ಬೆಂಗಳೂರು: ಕರೋನಾ ಮಹಾಮಾರಿಯಿಂದಾಗಿ ಸಮಸ್ಯೆಗೆ ಸಿಲುಕಿರುವ ಚಿತ್ರರಂಗದ ಸಾವಿರಾರು ಕಾರ್ಮಿಕರ ನೆರವಿಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಅವರು ಮುಂದಾಗಿದ್ದಾರೆ. ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ಇನ್ಫೋಸಿಸ್ ಫೌಂಡೇಶನ್ ವಿತರಿಸಲಿದ್ದು, ಈ ಕಾರ್ಯಕ್ಕೆ ನಗರದ ಬನಶಂಕರಿ ಪೋಸ್ಟ್ ಆಫೀಸ್ ಬಳಿಯಲ್ಲಿ ಚಾಲನೆ ನೀಡಲಾಯಿತು.
ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ ರಾ ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಸೇರಿದಂತೆ ಹಲವರು ಈ ಕಾರ್ಯಕ್ಕೆ ಚಾಲನೆ ನೀಡಿದರು. ಇನ್ಪೋಸಿಸ್ ಫೌಂಡೇಷನ್ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಣೆಯ ಕಾರ್ಯವನ್ನು ಮುಂದುವರೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗಾಳೀಪಟ – 2 ಸಿನೆಮಾದ ನಿರ್ಮಾಪಕರಾದ ರಮೇಶ್ ರೆಡ್ಡಿ, ಇನ್ಪೋಸಿಸ್ ಫೌಂಡೇಷನ್ ನ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಅವರಿಂದ ದೇಶ ಹಾಗೂ ರಾಜ್ಯದಲ್ಲಿ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿಯನ್ನು ತೋರಿಸಿರುವುದು ಸ್ವಾಗತಾರ್ಹ ವಿಷಯವಾಗಿದೆ ಎಂದು ಹೇಳಿದರು.
ಸಾರಾ ಗೋವಿಂದು ಮಾತನಾಡಿ, 18 ಚಲನ ಚಿತ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಕರೋನಾ ಕರ್ಪ್ಯೂದಿಂದಾಗಿ ಎಲ್ಲರ ಜೀವನ ತೊಂದರೆಗೆ ಸಿಲುಕಿದೆ. ಅವರ ಜೀವನಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಲು ಇನ್ಪೋಸಿಸ್ ಫೌಂಡೇಷನ್ ನ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಮುಂದಾಗಿರುವುದು ಬಹಳ ಸಂತಸದ ವಿಷಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್, ನಿರ್ಮಾಪಕ ರಮೇಶ್ ರೆಡ್ಡಿ, ಸಾರಾ ಗೋವಿಂದು, ರವಿಶಂಕರ್ ಸೇರಿದಂತೆ ಹಲವು ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…