ಸುರಪುರ: ತಾಲೂಕಿನ ಬೋನ್ಹಾಳ ಗ್ರಾಮದಲ್ಲಿ ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಪಡಿತರ ವಿತರಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದಿಂದಾಗಿ ತಹಸೀಲ್ದಾರರು ನ್ಯಾಯಬೆಲೆ ಅಂಗಡಿಯ ಡೀಲರ್‌ಗೆ ಪಡಿತರ ವಿತರಿಸದಂತೆ ಆದೇಶ ಮಾಡಿ,ಬೋನ್ಹಾಳ ನ್ಯಾಯಬೆಲೆ ಅಂಗಡಿಯನ್ನು ಅಮಾನತ್ತಿನಲ್ಲಿಡಲಾಗಿದೆ.
ಆದರೆ ಕೊರೊನಾ ಭೀತಿಯಿಂದಾಗಿ ಗ್ರಾಮದಲ್ಲಿ ಲಾಕ್‌ಡೌನ್ ಇರುವುದರಿಂದ ಜನತೆ ಆಹಾರಕ್ಕಾಗಿ ಪರಿತಪಿಸುವಂತಾಗಿದೆ.ಸರಕಾರ ಎರಡು ತಿಂಗಳ ಪಡಿತರ ಕಾರ್ಡುದಾರರು ಮತ್ತು ಕಾರ್ಡ್ ಇಲ್ಲದ ಬಡವರಿಗು ವಿತರಿಸಲು ಆದೇಶ ಮಾಡಿದೆ,ಆದರೆ ಪಡಿತರ ವಿತರಣೆಯಲ್ಲಿ ಅಕ್ರಮ ಕಾರಣದಿಂದ ಈಗ ಪಡಿತರ ವಿತರಣೆ ನಿಲ್ಲಿಸಿದ್ದರಿಂದ ಗ್ರಾಮದ ಜನರಿಗೆ ತೊಂದರೆಯಾಗಿದೆ.ತಾಲೂಕು ಆಡಳಿತ ಬೇರೊಬ್ಬ ಡೀಲರ್‌ಗಾದರು ಗ್ರಾಮದಲ್ಲಿ ಪಡಿತರ ವಿತರಣೆಗೆ ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ತಹಸೀಲ್ದಾರರಲ್ಲಿ ಮನವಿ ಮಾಡಿದ್ದಾರೆ.
ಈಗಾಗಲೆ ಕೆಲಸವಿಲ್ಲದೆ ಹೈರಾಣಾಗಿರುವ ಜನರು ಒಂದೊತ್ತಿನ ಊಟಕ್ಕು ಕಷ್ಟಪಡುವಂತಾಗಿದೆ.ಇಂತಹ ಸಂದರ್ಭದಲ್ಲಿ ಪಡಿತರ ಧಾನ್ಯವು ನೀಡದಿದ್ದಲ್ಲಿ ಮತ್ತು ಸಮಸ್ಯೆಯಾಗಲಿದೆ.ಈಗಾಗಲೆ ಅರ್ಧದಷ್ಟು ಕಾರ್ಡುದಾರರಿಗೆ ಪಡಿತರ ವಿತರಿಸಿದ್ದು ಇನ್ನುಳಿದ ಕಾರ್ಡುದಾರರಿಗೆ ಮತ್ತು ಕಾರ್ಡು ಇಲ್ಲದ ಬಡ ಜನತೆಗೆ ಕೂಡಲೆ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಗ್ರಾಮದ ಸುಭಾಶ್ಚಂದ್ರ ಭೋಸ್ ಯುವಕ ಸಂಘದ ಸದಸ್ಯರು ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…