ಶಹಾಬಾದ: ಕೇವಲ ಶಹಾಬಾದ ನಗರದ ಬಡಾವಣೆಯಲ್ಲೇ ಬಡವರಿಲ್ಲ. ಗೋಳಾ(ಕೆ) ಗ್ರಾಮದಲ್ಲೂ ಬಡವರಿದ್ದಾರೆ. ಅವರಿಗೂ ಆಹಾರ ಕಿಟ್ ವಿತರಿಸಿ ಎಂದು ದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್ ಶಾಸಕ ಬಸವರಾಜ ಮತ್ತಿಮೂಡು ಅವರಿಗೆ ಮನವಿ ಮಾಡಿದ್ದಾರೆ.
ರಾಮಘಡ ಆಶ್ರಯ ಕಾಲೋನಿಯಲ್ಲಿ ಎರಡು ಬಾರಿ ಹಂಚಿಕೆ ಮಾಡಲಾಗಿದೆ.ಅಲ್ಲದೇ ಸರ್ಕಾರದಿಂದ ಬಂದ ಉಚಿತ ಹಾಲು ದುರುಪಯೋಗವಾಗುತ್ತಿದೆ.ಇದ್ದವರಿಗೆ ಆಹಾರ ಕಿಟ್ ಹಾಗೂ ಹಾಲು ವಿತರಿಸಲಾಗುತ್ತಿದೆ.ನಗರದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅನೇಕ ಜನರು ಕಡುಬಡವರಿದ್ದಾರೆ.
ಲಾಕ್‍ಡೌನ್ ಆಗಿದ್ದಾಗನಿಂದ ಬಡವರಿಗೆ ಕೆಲಸವಿಲ್ಲ. ಕೈಯಲ್ಲಿ ಕಾಸಿಲ್ಲದೇ ಪರದಾಡುತ್ತಿದ್ದಾರೆ. ನಿಜವಾಗಿಯೂ ಇಂತಹವರಿಗೆ ಸಲ್ಲಬೇಕು.ಆದರೆ ಆಗುತ್ತಿರುವುದೇ ಬೇರೆ. ಬಡವರಿಗೆ ಆಹಾರ ಕಿಟ್ ವಿತರಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಹಂಚಿಕೆಯಾಗಿಲ್ಲ. ಆದ್ದರಿಂದ ದಯಮಾಡಿ ನಗರ ಸೇರಿದಂತೆ ಗೋಳಾ(ಕೆ) ಗ್ರಾಮದ ಕಡು ಬಡವರಿಗೆ ಆಹಾರ ಧಾನ್ಯಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…