ಸುರಪುರ: ತಾಲ್ಲೂಕಿನಲ್ಲಿಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿನ ಅಭೀವೃಧ್ದಿ ಕಾಮಗಾರಿಗಳ ಕುಂಟಿತಕ್ಕೆ ಕಾರ್ಯನಿರ್ವಾಹಕ ಅಧಿಕಾರಿ ಹಾಗು ಸಹಾಯಕ ನಿರ್ದೇಶಕರೆ ಕಾರಣ ಎಂದು ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ನೇರವಾಗಿ ಅರೋಪಿಸಿದರು.
ನಗರದ ತಾಲ್ಲೂಕು ಪಂಚಾಯತಿ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೇಳತೀರದಾಗಿದೆ ಆದರೆ ಗ್ರಾಮ ಪಂಚಾಯತಿ ಅಭೀವೃಧ್ದಿ ಅಧಿಕಾರಿಗಳು ಸಮಸ್ಯೆಗಳಿಗು ತಮಗು ಸಂಬಂಧವಿಲ್ಲ ಎಂಬಂತಿದ್ದಾರೆ. ಇದನ್ನು ಖಂಡಿಸಿ ಅನೇಕ ಬಾರಿ ಮನವಿ ಸಲ್ಲಿಸಿದರು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳೊಂದಿಗೆ ಕರ್ತವ್ಯ ಲೋಪದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದರು.
ಗ್ರಾಮೀಣ ಜನರ ಬದುಕಿಗೆ ಆಸರೆಯಾಗಬೇಕಿದ್ದ ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿದಿದೆ ಇದರ ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ್ ತಮಗು ಅದಕ್ಕೂ ಸಂಭಂಧವಿಲ್ಲದಂತೆ ಇದ್ದು ಉದ್ಯೋಗ ಖಾತ್ರಿ ಹಣ ದುರುಪಯೋಗದಲ್ಲಿ ತೊಡಗಿದ್ದಾರೆ. ಇಂತಹ ಅಧಿಕಾರಿಗಳಿಂದ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ. ಆದ್ದರಿಂದ ಕೂಡಲೆ ಈ ಇಬ್ಬರು ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಮತ್ತು ಸರಿಯಾಗಿ ಕೆಲಸ ನಿರ್ವಹಿಸದ ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳನ್ನ ಅಮಾನತ್ತುಗೊಳಿಸಬೇಕು ಮತ್ತು ಉದ್ಯೋಗ ಖಾತ್ರಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೊಳಪಡಿಸಬೇಕು. ಒಂದು ವೇಳೆ ನಮ್ಮ ಬೇಡಿಕೆ ನಿರ್ಲಕ್ಷಿಸಿದರೆ ಈ ತಿಂಗಳ ಇಪ್ಪತ್ತೆರಡನೆ ತಾರೀಖಿನಂದು ತಾಲ್ಲೂಕು ಪಂಚಾಯತಿ ಕಚೇರಿ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.ನಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ತೆದಾರ ಪ್ರವೀಣ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ,ರಾಮಣ್ಣ,ದೇವರಾಜ ಮದಕರಿ,ದೇವಿಂದ್ರಪ್ಪ,ನಜೀರಸಾಬ ಇತರರಿದ್ದರು.