ಆಳಂದ: ತಾಲೂಕಿನ ಖಜೂರಿ ಗ್ರಾಮದ ರಾಜಶ್ರೀ ಶಿವಾನಂದ ಘಂಟೆ(45) ದೀರ್ಘಕಾಲಿಕ ಅನಾರೋಗ್ಯದಿಂದ ರವಿವಾರ ನಿಧನರಾದರು.
ಮೃತರು ಒಂದು ಅವಧಿಗೆ ಖಜೂರಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದರು. ಮೃತರು ಪತಿ, ಇರ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದ ತೋಟದಲ್ಲಿ ಭಾನುವಾರ ಜರುಗಿತು.
ಮೃತರ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ, ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ, ಆನಂದರಾವ ಪಾಟೀಲ ಕೊರಳ್ಳಿ, ಮಲ್ಲಿಕಾರ್ಜುನ ಕಂದಗೂಳೆ, ಅಶೋಕ ಸಾವಳೇಶ್ವರ ಸಂತಾಪ ವ್ಯಕ್ತಪಡಿಸಿದ್ದಾರೆ.