ಕಲಬುರಗಿ: ಮಹಾನ ಯುಗಪುರುಷರು ಮತ್ತು ಲಿಂಗಾಯತ ಧರ್ಮದ ಸಂಸ್ಥಾಪಕರಾದ ವಿಶ್ವಗುರು ಬಸವಣ್ಣನವರ 887ನೇ ಜಯಂತಿ ಈ ಸಲ ಅತ್ಯಂತ ಸರಳವಾಗಿ ಆಚರಿಸಲಾಗುವುದು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ಪ್ರಧಾನ ಕಾರ್ಯದರ್ಶಿ ಆರ್.ಜಿ.ಶೆಟಗಾರ, ಖಜಾಂಚಿ ಬಸವರಾಜ ಮೊರಬದ ಮತ್ತು ಪ್ರಮುಖ ಮಹಾಂತೇಶ ಕಲಬುರಗಿ ತಿಳಿಸಿದ್ದಾರೆ.
ಭಕ್ತಿ ಭಂಡಾರಿ ಅಣ್ಣ ಬಸವಣ್ಣ 887ನೇಯ ಜಯಂತಿಯ ಅಂಗವಾಗಿ ಏ.26 ರಂದು ಬೆಳಗ್ಗೆ 8 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಲಾರ್ಪಣೆ ಮಾಡಲಾಗುವುದು.
ಅಂದು ಸರಳವಾಗಿ ಬಸವ ಜಯಂತಿ ಆಚರಿಸಿ ಅಲ್ಲಿಂದ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಕರೊನಾ ಹಾವಳಿ ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬೆಂಬಲಿಸಿ ಮತ್ತು ಪರಿಹಾರ ಕಾರ್ಯಗಳಿಗೆ ಡಿಸಿಯವರ ಮೂಲಕ ಲಕ್ಷ ರೂ. ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಏಕ ದೇವ ಉಪವಾಸನೆ,ಅಂಗೈಯಲ್ಲಿ ದೇವರನ್ನು (ಲಿಂಗ) ಕೊಟ್ಟ ಬಸವಣ್ಣ ಎ¯್ಲÁ ಸಮಾಜಕ್ಕೆ ದಾರಿ ದೀಪವಾಗಿದ್ದಾರೆ. ಎಲ್ಲ ಕಾಯಕ ಶರಣರ ಸ್ಮರಣೆ ಮಾಡುವ ಮೂಲಕ ವಿಶ್ವಕ್ಕೆ ಕಾಡುತ್ತಿರುವ ಕರೊನಾ ಮುಕ್ತಗೊಳಿಸುವಂತೆ ಪ್ರಾರ್ಥಿಸಲಾಗುವುದು. ಉಳಿದಂತೆ ಸಾರ್ವಜನಿಕರು ಹಾಗೂ ಬಸವಾಭಿಮಾನಿಗಳು ತಮ್ಮ ಮನೆಗಳಲ್ಲಿಯೇ ಪೂಜೆ ಮಾಡುವ ಮೂಲಕ ಬಸವ ಸ್ಮರಣೆ ಮಾಡುವ ಮೂಲಕ ಸರಳವಾಗಿ ಬಸವ ಜಯಂತಿ ಆಚರಿಸಬೇಕು, ಯಾರು ಜಗತ್ ವೃತ್ತದ ಕಡೆಗೆ ಆಗಮಿಸಬಾರದು ಮತ್ತು ಮೆರವಣಿಗೆ ಇತ್ಯಾದಿ ಮಾಡಬಾರದು ಎಂದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರೊನಾ ತಡೆಗಟ್ಟಲು ಜಿಲ್ಲಾಡಳಿತ ಮತ್ತು ಸರ್ಕಾರ ನೀಡಿರುವ ಸಲಹೆಗಳನ್ನು ಎಲ್ಲರು ಪಾಲಿಸಬೇಕು ಎಂದು ಮನವಿ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…