ಕೊರೋನಾ ಸೋಂಕಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 17ಕ್ಕೆ

0
77

ಕಲಬುರಗಿ: ಕಿಲ್ಲರ್ ಕೊರೋನಾ ರಾಜ್ಯದಲ್ಲಿ ಮತ್ತೊಂದು 80 ವರ್ಷದ ವೃದ್ಧ ಮೃತಪಟ್ಟಿದ್ದಾರೆಂದು ವೈದ್ಯಕೀಯ ‌ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಸೋಂಕಿಗೆ ಬಲಿಯಾದ ಸಂಖ್ಯೆ 4ಕ್ಕೆ ತಲುಪಿದೆ.

ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದ, ಮೊನ್ನೆ ಮಧ್ಯರಾತ್ರಿ ಜ್ವರ ಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿನ್ನೆ ಬೆಳಗ್ಗೆ 9 ಗಂಟೆಗೆ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ಮೃತರ ವರದಿ ಬಂದಿದ್ದು, ಇವರಿಗೆ ಕೊರೊನಾ ಪಾಸಿಟಿವ್ ಇರುವ ಅಂಶ ಬೆಳಕಿಗೆ ಬಂದಿದೆ ಎಂದು ಸಚಿವ ಸುಧಾಕರ್ ಟ್ವೀಟ್​​ ಮಾಡಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.

Contact Your\'s Advertisement; 9902492681

ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ 17 ಜನರಲ್ಲಿ 80% ಜನ 55 ವಯಸ್ಸಿನ ಮೇಲ್ಪಟ್ಟವರಾಗಿದ್ದು, ಹೀಗಾಗಿಯೇ, ಆರೋಗ್ಯ ಇಲಾಖೆಯು ಹಿರಿಯರಿಗೆ ಅನಾರೋಗ್ಯ ಸಮಸ್ಯೆ ಉಂಟಾದರೆ ತಕ್ಷಣವೇ ಆಸ್ಪತ್ರೆಗೆ ಕರೆ ತರುವಂತೆ ಮನವಿ ಮಾಡಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here