ಕಲಬುರಗಿ: ಕಿಲ್ಲರ್ ಕೊರೋನಾ ರಾಜ್ಯದಲ್ಲಿ ಮತ್ತೊಂದು 80 ವರ್ಷದ ವೃದ್ಧ ಮೃತಪಟ್ಟಿದ್ದಾರೆಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಸೋಂಕಿಗೆ ಬಲಿಯಾದ ಸಂಖ್ಯೆ 4ಕ್ಕೆ ತಲುಪಿದೆ.
ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದ, ಮೊನ್ನೆ ಮಧ್ಯರಾತ್ರಿ ಜ್ವರ ಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿನ್ನೆ ಬೆಳಗ್ಗೆ 9 ಗಂಟೆಗೆ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ಮೃತರ ವರದಿ ಬಂದಿದ್ದು, ಇವರಿಗೆ ಕೊರೊನಾ ಪಾಸಿಟಿವ್ ಇರುವ ಅಂಶ ಬೆಳಕಿಗೆ ಬಂದಿದೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ 17 ಜನರಲ್ಲಿ 80% ಜನ 55 ವಯಸ್ಸಿನ ಮೇಲ್ಪಟ್ಟವರಾಗಿದ್ದು, ಹೀಗಾಗಿಯೇ, ಆರೋಗ್ಯ ಇಲಾಖೆಯು ಹಿರಿಯರಿಗೆ ಅನಾರೋಗ್ಯ ಸಮಸ್ಯೆ ಉಂಟಾದರೆ ತಕ್ಷಣವೇ ಆಸ್ಪತ್ರೆಗೆ ಕರೆ ತರುವಂತೆ ಮನವಿ ಮಾಡಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…