ಹಿರಿಯ ನಾಗರೀಕರಿಂದ  50 ಸಾವಿರ  ದೇಣಿಗೆ

0
38

ಬೆಂಗಳೂರು: ಕೊರೋನ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳಿಗಾಗಿ ನಿವೃತ್ತಿ ವೇತನ ಪಡೆಯುವ ಬಸವೇಶ್ವರ ನಗರದ ಹಿರಿಯ ನಾಗರೀಕರು ಕ್ರೀಡಾ ಮತ್ತು ಸಾಂಸ್ಕøತಿಕ ಸಂಸ್ಥೆ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50ಸಾವಿರ ರೂ. ದೇಣಿಗೆ ನೀಡಲಾಗಿದೆ.

ಶಿಕ್ಷಣ ಸಚಿವ ಸುರೇಶ್‍ಕುಮಾರ್‍ಗೆ ಹಿರಿಯ ನಾಗರೀಕರ ಕ್ರೀಡಾ ಮತ್ತು ಸಂಸ್ಕøತಿ ಸಂಸ್ಥೆಯ ಕಾರ್ಯದರ್ಶಿ ವಿಶ್ವನಾಥ್ ಚೆಕ್ ಮೂಲಕ ವಿತರಿಸಿದರು. ಈ ವೇಳೆ ಬಿಬಿಎಂಪಿಯ ಮಾಜಿ ಉಪಮೇಯರ್ ಎಸ್.ರಂಗಣ್ಣ ಮಾತನಾಡಿ, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕೊರೋನ ಸೋಂಕಿನ ವಿರುದ್ದ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೆಚ್ಚಿನ ದೇಣಿಗೆ ನೀಡಬೇಕೆಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here