ಬಿಸಿ ಬಿಸಿ ಸುದ್ದಿ

ಕೊರೋನಾ ಪತ್ತೆ: ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಗುತ್ತೇದಾರ ಸೂಚನೆ

ಆಳಂದ: ಪಟ್ಟಣದ ಒಬ್ಬ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡು ಸೋಂಕು ಹರಡುವುದನ್ನು ತಡೆಯಲು ಮುಂದಾಗಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಾಲೂಕಾ ಆಡಳಿತಕ್ಕೆ ಸೂಚಿಸಿದರು.

ಬುಧುವಾರ ತಹಸೀಲ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೋಂಕು ಪತ್ತೆಯಾಗುರುವ ಪ್ರದೇಶದಲ್ಲಿ ೧ ಕೀ.ಮೀ ಅಂತರದಲ್ಲಿ ಸಿಲ್‌ಡೌನ್ ಮಾಡಬೇಕು ಜೊತೆಗೆ ಅದರ ಹಿಂದಿನ ೧ ಕೀ.ಮೀ ವ್ಯಾಪ್ತಿಯಲ್ಲಿ ಬಫರ್‌ಜೋನ್ ಅಳವಡಿಸಿಕೊಳ್ಳಲು ಹೇಳಿದರು.

ಸೋಂಕು ಪತ್ತೆಯಾಗಿರುವ ವ್ಯಕ್ತಿಯು ವಾಸವಾಗಿದ್ದ ಇಡೀ ಪ್ರದೇಶದ ಜನರನ್ನು ತಪಾಸಣೆಗೆ ಒಳಪಡಿಸಿ, ಸ್ಕ್ರೀನಿಂಗ್ ಮಾಡಬೇಕು ಹಾಗೂ ಆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಸ್ಥಳಗಳಲ್ಲಿ ಪುರಸಭೆ ವತಿಯಿಂದ ನಿಷೇಧಿತ ಪ್ರದೇಶವೆಂದು ಫ್ಲೆಕ್ಸ್ ಹಾಕಲು ಆದೇಶಿಸಿದರು.

ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ವಿನಾಕಾರಣ ಓಡಾಟ ಮಾಡಿದರೇ ಅವರ ಮೇಲೆ ಕಾನೂನಿನ ಪ್ರಕಾರ ಉಗ್ರ ಕ್ರಮಕೈಗೊಳ್ಳಲಾಗುವುದು. ದಿನನಿತ್ಯದ ಉಪಜೀವನಕ್ಕೆ ಬೇಕಾಗುವ ದಿನಸಿ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಯವರು ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಿ, ಮಾಸ್ಕ್ ಗ್ಲೌಸ್ ಧರಿಸಿಕೊಂಡು ನಿಗದಿತ ಸಮಯಕ್ಕೆ ವ್ಯಾಪಾರ ಮಾಡಬೇಕು ಗ್ರಾಹಕರು ಕೂಡಾ ಮಾಸ್ಕ್ ಧರಿಸಿಕೊಂಡೇ ಪದಾರ್ಥಗಳನ್ನು ಖರೀದಿಸಬೇಕು.

ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಮಾರುವವರು ಅದೇ ಪ್ರದೇಶದ ನಿವಾಸಿಗಳಾಗಿದ್ದು ತಳ್ಳು ಗಾಡಿಯಲ್ಲಿ ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ತಹಸೀಲ್ದಾರ ದಯಾನಂದ ಪಾಟೀಲ, ಇಒ ಸಂಜಯರೆಡ್ಡಿ, ಸಿಪಿಆಯ್ ಶಿವಾನಂದ ಗಾಣಿಗೇರ್, ಜೆಸ್ಕಾಂ ಎಇಇ, ಪುರಸಭೆ ಮುಖ್ಯಾಧಿಕಾರಿ, ಶೀರಸ್ತೆದಾರ, ಉಪ ತಹಸೀಲ್ದಾರರು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago