ಕಲಬುರಗಿ: ಕೊರೋನಾ ವೈರಸ್ (ಕೊವೀಡ್-19) ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ರಾಜ್ಯ ಸರ್ಕಾರವು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರುಗಳು, ಸಾಹಿತಿಗಳಿಗೆ 2000 ರೂ. ಗಳ ಆರ್ಥಿಕ ನೆರವು ನೀಡಲು ಯೋಜನೆ ರೂಪಿಸಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಕಲಾವಿದರು, ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆರ್ಥಿಕ ನೆರವು ಪಡೆಯಲಿಚ್ಛಿಸುವ ಕಲಾವಿದರು, ಸಾಹಿತಿಗಳು 10 ವರ್ಷ ಕಲಾ ಸೇವೆ ಸಲ್ಲಿಸಿರಬೇಕು. ವೃತ್ತಿ ನಿರತ ಕಲಾವಿದರಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರಬೇಕು. ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಆಧಾರ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ (ಪಾಸ್‍ಬುಕ್ ಜಿರಾಕ್ಸ್ ಪ್ರತಿ), ಐ.ಎಫ್.ಎಸ್.ಸಿ. (IಈSಅ) ಸಂಖ್ಯೆ, ದೂರವಾಣಿ ಸಂಖ್ಯೆ ವಿವರದೊಂದಿಗೆ ಬಿಳಿ ಹಾಳೆಯಲ್ಲಿ ಸ್ಪಷ್ಟವಾಗಿ ಕಾಣುವಂತೆ ಬರೆದ ಅರ್ಜಿಯನ್ನು 2020ರ ಏಪ್ರಿಲ್ 27 ರೊಳಗಾಗಿ ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ಇ-ಮೇಲ್ ವಿಳಾಸ kannadaculture.glb@gmail.com ಕ್ಕೆ ಹಾಗೂ ವಾಟ್ಸ್ ಆ್ಯಪ್ ಸಂಖ್ಯೆ 9036531107 ಗೆ ಕಳುಹಿಸಬಹುದಾಗಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಾಸಾಶನ ಪಡೆಯುತ್ತಿರುವವರು ಹಾಗೂ ಸರ್ಕಾರಿ ನೌಕರರು (ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರದ ಅನುದಾನಿತ ಸಂಸ್ಥೆಗಳು, ಅರೆಸರ್ಕಾರಿ ಸಂಸ್ಥೆಗಳ) ಕಲಾವಿದರು, ಸಾಹಿತಿಗಳು ಇದಕ್ಕೆ ಅರ್ಹರಾಗಿರುವುದಿಲ್ಲ. ತಪ್ಪು ಮಾಹಿತಿ ನೀಡಿ ಲಾಭ ಪಡೆಯುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮದ ಕಾನೂನಿನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…