ವಾಡಿ: ಲಾಕ್‌ಡೌನ್ ಘೋಷಣೆಯಿಂದ ಕ್ಷೌರ ವೃತ್ತಿ ಸ್ಥಗಿತಗೊಂಡಿದ್ದು, ಜೀವನ ನಡೆಸುವುದು ಕಷ್ಟವಾಗಿದೆ. ಅಂಗಡಿ ತೆರೆಯಲು ಅವಕಾಶ ಕೊಡಿ ಅಥವ ಪ್ರತಿಯೊಂದು ಕುಟುಂಬಕ್ಕೂ ದಿನಸಿ ಸೌಲಭ್ಯ ಒದಗಿಸಿ ಎಂದು ಸವಿತಾ ಸಮಾಜದ ನಗರಾಧ್ಯಕ್ಷ ಹಣಮಂತ ಶಿವುಪುರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡುವ ಮೂಲಕ ಸಮಾಜದ ಜನರ ಬದುಕಿನ ಕಷ್ಟ ಹೇಳಿಕೊಂಡಿರುವ ಶಿವುಪುರ, ಕ್ಷೌರ ವೃತ್ತಿಯೊಂದೇ ನಮ್ಮನ್ನು ಬದುಕಿಸುತ್ತಿದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಘೋಷಿಸಲಾದ ಲಾಕ್‌ಡೌನ್ ಆದೇಶಕ್ಕೆ ತಲೆಬಾಗಿ ಅಂಗಡಿಗಳನ್ನು ಬಂದ್ ಮಾಡಿ ಮನೆಯಲ್ಲಿದ್ದೇವೆ. ತಿಂಗಳಿಂದ ಉಪಜೀವನ ನಡೆಸುವುದು ಅತ್ಯಂತ ಕಷ್ಟಕರವಾಗಿದೆ.
ಇಂದು ದುಡಿದು ಇಂದೇ ಊಟ ಮಾಡಿ ಬದುಕುವ ಕುಟುಂಬಗಳು ಸವಿತಾ ಸಮಾಜದಲ್ಲಿ ಶೇ.೯೦ರಷ್ಟಿವೆ. ವೃತ್ತಿಗೆ ಮರಳದಿದ್ದರೆ ಕ್ಷೌರ ವೃತ್ತಿಯನ್ನೇ ನಂಬಿರುವ ನೂರಾರು ಬಡ ಕುಟುಂಬಗಳು ಊಟಕ್ಕೆ ಭಿಕ್ಷೆ ಬೇಡಬೇಕಾಗುತ್ತದೆ. ಈ ವರೆಗೂ ಸರಕಾರ ನಮ್ಮ ನೆರವಿಗೆ ಬಂದಿಲ್ಲ. ಸವಿತಾ ಸಮಾಜದ ಪ್ರತಿ ಕುಟುಂಬಕ್ಕೂ ಆಹಾರದ ವ್ಯವಸ್ಥೆ ಮಾಡಬೇಕು ಅಥವ ಅಂಗಡಿ ತೆರೆಯಲು ಅವಕಾಶ ನೀಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…