ಬಿಸಿ ಬಿಸಿ ಸುದ್ದಿ

ವೈದ್ಯರು ಕೊರೊನಾ ಯುದ್ಧದ ಸೈನಿಕರು: ಎಐಡಿಎಸ್‌ಒ

ವಾಡಿ: ಕೊರೊನಾ ಯುದ್ಧದ ಹೋರಾಟದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ವೃತ್ತಿ ನಿರತರು, ಆಶಾ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರ ಜೀವ ಸುರಕ್ಷತೆ ಕಾಪಾಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಸರಕಾರವನ್ನು ಆಗ್ರಹಿಸಿದೆ.

ಸಾಮಾಜಿಕ ಅಂತರ ಕಾಪಾಡುವ ಜತೆಗೆ ಬಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಮೌನ ಪ್ರತಿಭಟನೆ ನಡೆಸಿರುವ ಸ್ಥಳೀಯ ಎಐಡಿಎಸ್‌ಒ ಕಾರ್ಯಕರ್ತರು, ವೈದ್ಯರು ಎದುರಿಸುತ್ತಿರುವ ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಕೊರೊನಾ ಹೋರಾಟದ ಮುಂಚೂಣಿಯಲ್ಲಿರುವ ವೃತ್ತಿ ನಿರತರಿಗೆ ಸಮರ್ಪಕ ಸುರಕ್ಷಾ ಸಾಮಾಗ್ರಿಗಳಿಲ್ಲ. ಪಿಪಿಇ ಕಿಟ್‌ಗಳ ಕೊರತೆಯಿಂದ ಜೀವ ಸುರಕ್ಷತೆ ಇಲ್ಲವಾಗಿದೆ. ಸರಿಯಾದ ಸಂಬಳವೂ ಇಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರ ಬುಕಿಗೆ ಸರಕಾರ ಆಸರೆಯಾಗಬೇಕು ಎಂದು ಆಗ್ರಹಿಸಿದರು.

ದೇಶ ಕಟ್ಟುವ ಕಾರ್ಮಿಕರು, ಬಡ ರೈತರು, ಕೃಷಿ ಕಾರ್ಮಿಕರು ಅತ್ಯಂತ ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ. ವಲಸೆ ಕಾರ್ಮಿಕರು ಜೀವನಾವಶ್ಯಕಗಳಿಲ್ಲದೆ ತಮ್ಮೂರಿಗೆ ನೂರಾರು ಮೈಲಿ ನಡೆದು ಹೋಗುತ್ತಿದ್ದಾರೆ. ದಣಿವು ಹಸಿವಿನಿಂದ ಕಾರ್ಮಿಕರು ಮತ್ತು ಅವರ ಮಕ್ಕಳು ಅಸು ನೀಗಿದ್ದಾರೆ. ದುಡಿಯುವ ಜನರಿಗೆ ಸರಕಾರಗಳಿಂದ ಸರಿಯಾದ ನೆರವು ದೊರಕಿಲ್ಲ. ಜನಸಾಮಾನ್ಯರು ಕಾರ್ಮಿಕರ ಸಹಾಯಕ್ಕೆ ಬಂದಿದ್ದಾರೆ. ಬೆಳೆದ ಬೆಳೆ ಮಾರುಕಟ್ಟೆಗೆ ಸಾಗಿಸಲು ವ್ಯವಸ್ಥೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ.

ಕಷ್ಟಪಟ್ಟು ಸಾಗಿಸಿದರೂ ಕೊಳ್ಳುವವರಿಲ್ಲ. ದುಡಿಮೆಯಿಲ್ಲದ ರೈತ ಒಪ್ಪತ್ತಿಗೂ ಪರದಾಡುವ ಪರಿಸ್ಥಿತಿಯಿದೆ. ಸರಕಾರ ಸಂಕಷ್ಟದಲ್ಲಿರುವವರಿಗೆ ರೇಷನ್ ವ್ಯವಸ್ಥೆ ಮಾಡಬೇಕು ಎಂದು ಎಐಡಿಎಸ್‌ಒ ಅಧ್ಯಕ್ಷ ಗೌತಮ ಪರತೂರಕರ್ ಒತ್ತಾಯಿಸಿದರು. ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಮುಖಂಡರಾದ ಅರುಣ ಹಿರೆಬಾನರ ಹಾಗೂ ದತ್ತಾತ್ರೇಯ ಹುಡೇಕರ ಆಂದೋಲನದಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago