ಹೈದರಾಬಾದ್ ಕರ್ನಾಟಕ

ಕಲಬುರಗಿ ಪ್ರಯೋಗಾಲಯ ವರದಿಯೇ ಅಂತಿಮ: ಡಾ.ಉಮೇಶ ಜಾಧವ

ಕಲಬುರಗಿ: ಕೋವಿಡ್-19 ಪರೀಕ್ಷೆ ಕೈಗೊಳ್ಳುತ್ತಿರುವ ಕಲಬುರಗಿ ಜಿಮ್ಸ್ ಪ್ರಯೋಗಾಲಯ ನೀಡುವ ವೈದ್ಯಕೀಯ ವರದಿ ಅಂತಿಮವಾಗಿದ್ದು, ದೃಢೀಕರಣಕ್ಕಾಗಿ ಬೆಂಗಳೂರು ಅಥವಾ ಪುಣೆ ಕಳುಹಿಸುವ ಅಗತ್ಯವಿಲ್ಲ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಹೇಳಿದರು.

ಕಲಬುರಗಿ ಪ್ರಯೋಗಾಲಯ ಆರಂಭವಾದ ನಂತರ ಶಿಷ್ಠಚಾರದ ಪ್ರಕಾರ ಬೆಂಗಳೂರು ಅಥವಾ ಪುಣೆಗೆ ಕಳುಹಿಸಲಾಗುತಿತ್ತು. ಇದೀಗ ಈ ಪ್ರಯೋಗಾಲಯವನ್ನು ಉನ್ನತ್ತೀಕರಿಸಿರುವುದರಿಂದ ದೃಡೀಕರಣಕ್ಕಾಗಿ ಬೇರೆ ಪ್ರಯೋಗಾಲಕ್ಕೆ ವರದಿ ಕಳುಹಿಸುವ ಅಗತ್ಯವಿಲ್ಲ. ಇನ್ನೂ ಕೋವಿಡ್-19 ಪರೀಕ್ಷೆಗೆ ಅಗತ್ಯ ಪ್ರಮಾಣದಲ್ಲಿ ಕೆಮಿಕಲ್ ಸಹ ಲಭ್ಯವಿದೆ ಎಂದರು.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಕಿರಾಣಾ ದಿನಸಿಗಳು ಹೆಚ್ಚಿಗೆ ದರದಲ್ಲಿ ಮಾರಾಟ ಮಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಿಂದ ಕಿರಾಣಿ ದಿನಸಿಗಳನ್ನು ತೆಗೆದುಕೊಂಡು ಹೋಗಲು ವಾರದಲ್ಲಿ ಕನಿಷ್ಟ 4 ದಿನ ಕಲಬುರಗಿ ನಗರದ ಕಿರಾನಿ ದಿನಸಿಗಳ ಡೀಲರ್ ಅಂಗಡಿಗಳನ್ನು ತೆರೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಲಾಕ್ ಡೌನ್ ಸಂದರ್ಭದಲ್ಲಿ ವಿಕಲಚೇತನರ ಸಮಸ್ಯೆಗಳ ನಿವಾರಣೆಗೆ ಗ್ರಾಮೀಣ ಮತ್ತು ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಅಫಜಲಪೂರ, ಜೇವರ್ಗಿ ಮತ್ತು ಚಿತ್ತಾಪುರ ತಾಲೂಕಿನ ಭೀಮಾ ನದಿ ದಡಿಯಲ್ಲಿನ ಗ್ರಾಮಗಳ ಬೆಳೆಗಳಿಗೆ ನೀರು ಬಿಡುಗಡೆಗೆ ಮತ್ತು ಜಿಲ್ಲೆಯಾದ್ಯಂತ ಕುಡಿಯುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದರು.

ಕಲಬುರಗಿ ನಗರದಲ್ಲಿ ಕೊರೋನಾ ಸೊಂಕಿನಿಂದ ಇದೂವರೆಗೆ 4 ಜನ ಮೃತಪಟ್ಟಿದಲ್ಲದೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರುವುದು ಕಳವಳಕಾರಿಯಾಗಿದೆ. ಇದರ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ವೈದ್ಯಕೀಯ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದು, ಶ್ಲಾಘನೀಯ ಎಂದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಜಾತಿ, ಮತ ಹೊರತುಪಡಿಸಿ ಎಲ್ಲರು ಜಿಲ್ಲಾಡಳಿತ ಮತು ಅರೋಗ್ಯ ಇಲಾಖೆಯ ಎಲ್ಲಾ ಸೂಚನೆ ಪಾಲನೆ ಮಾಡಬೇಕು ಮತ್ತು ಅನಗತ್ಯ ಮನೆಯಿಂದ ಹೊರಬರಬಾರದು ಎಂದು ಡಾ.ಉಮೇಶ ಜಾಧವ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಮುಖಂಡ ಚಂದು ಪಾಟೀಲ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago