ಬಿಸಿ ಬಿಸಿ ಸುದ್ದಿ

ದೇವಸ್ಥಾನದ ಸಮಿತಿಯೊಂದಿಗೆ ಸಭೆ ನಡೆಸಿ ಎರಡೂ ಜಾತ್ರೆಗಳು ರದ್ದು

ಕಲಬುರಗಿ: ಕೊರೋನಾ ವೈರಸ್ (ಕೊವೀಡ್-೧೯) ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕಲಬುರಗಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. ಸೆಕ್ಷನ್ ೧೪೪ ರನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಇದರ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ ೨೬ ರಂದು ನಡೆಯಲಿರುವ ಕಲಬುರಗಿ ತಾಲೂಕಿನ ಧರ್ಮಾಪುರ ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ರಥೋತ್ಸವ, ಜಾತ್ರೆ ಹಾಗೂ ಏಪ್ರಿಲ್ ೨೮ ರಂದು ನಡೆಯಲಿರುವ ನಂದೂರ (ಕೆ) ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಅಗ್ಗಿ (ಅಗ್ನಿ) ತುಳಿಯುವ ಕಾರ್ಯಕ್ರಮ, ಜಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಕಲಬುರಗಿ ತಹಶೀಲ್ದಾರರಾದ ಮಲ್ಲೇಶ ತಂಗಾ ಅವರು ತಿಳಿಸಿದರು.

ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ಅವರ ನೇತೃತ್ವದಲ್ಲಿ ಗುರುವಾರ ಕಲಬುರಗಿ ತಾಲೂಕಿನ ಧರ್ಮಾಪುರ ಗ್ರಾಮದ ಶರಣಬಸವೇಶ್ವರ ದೇವಸ್ಥಾನ ಸಮಿತಿ, ನಂದೂರ (ಕೆ) ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಮಿತಿ ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಈ ಎರಡೂ ಸಂಪೂರ್ಣವಾಗಿ ಜಾತ್ರೆಗಳನ್ನು ರದ್ದುಪಡಿಸುವ ಕುರಿತು ಈ ತೀರ್ಮಾನ ಕೈಗೊಳ್ಳಲಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago