ಕಲಬುರಗಿ: ವಾಡಿ ಠಾಣೆ ಪಿಎಸ್ಐ ವಿಜಯಕುಮಾರ್ ಬಾವಗಿ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಇಂದು ಮಾದಿಗ ಸಮುದಾಯದ ಮುಖಂಡರಾದ ಮಲ್ಲಿಕಾರ್ಜುನ ಸೈದಾಪುರ ನೇತೃತ್ವದಲ್ಲಿ ಎಸ್ಪಿ ಯಡಾ ಮಾರ್ಟಿನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಮುಖಂಡರು, ದಕ್ಷ ಪೊಲೀಸ್ ಅಧಿಕಾರಿ ವಿಜಯಕುಮಾರ್ ಬಾವಗಿ ಅವರನ್ನು ವಾಡಿ ಠಾಣೆಗೆ ಪುನಃ ನಿಯೋಜಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಇತ್ತೀಚಿಗೆ ರಾವೂರ ಗ್ರಾಮದಲ್ಲಿ ನಡೆದ ನಿಷೇಧಾಜ್ಞೆ ಉಲ್ಲಂಘಿಸಿ ರಥೋತ್ಸವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾದ ಪಿಎಸ್ ಐ ಬಾವಗಿ ಅವರು ಜಾತ್ರೆ ಸಮಿತಿಯವ ಬಳಿ ಮುಚ್ಚಳಿಕೆ ಕರೆಸಿಕೊಳ್ಳುವ ಮೂಲಕ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಉದ್ದೇಶ ಪೂರಕವಾಗಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪಿ.ಎಸ್.ಐ ಬಾವಗಿ ಲಾಕ್ ಡೌನ್ ಘೋಷಣೆಯಿಂದ ಕೊರೋನಾ ವಾರಿಯರನಂತೆ ಊಟ ನಿದ್ದೆ ನಿಟ್ಟು ಶ್ರಮಿಸಿದ್ದು, ಇಂತಹ ದಕ್ಷ, ನಿಷ್ಠಾವಂತ ಅಧಿಕಾರಿಯನ್ನು ಪುಸಲಾಯಿಸಿ ಬಲಿಪಶು ಮಾಡಲಾಗಿದೆ ಎಂದರು.
ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಯಾವುದೇ ತಪ್ಪು ಮಾಡದೆ ಶಿಕ್ಷೆಗೆ ಗುರಿಯಾಗಿರುವ ಬಾವಗಿ ಅವರ ಅಮಾನತು ಆದೇಶವನ್ನು ಹಿಂಪಡೆದು ಪುನಃ ಕರ್ತವ್ಯಕ್ಕೆ ಹಾಜರು ಪಡಿಸಬೇಕೆಂದು ಯುವ ಮುಖಂಡರಾದ ಜಗದೀಶ್ ಮುಕ್ಕನಾಳ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…