ಬಿಸಿ ಬಿಸಿ ಸುದ್ದಿ

ಮನೆಯಲ್ಲೇ ಬಸವ ಜಯಂತಿ ಆಚರಿಸೋಣ: ಅಂಬಾರಾಯ ಅಷ್ಠಗಿ

ಕಲಬುರಗಿ: ಕೊರೋನಾ ಮಹಾಮಾರಿಯಿಂದಾಗಿ ದೇಶದಲ್ಲಿ ಲಾಕ್‌ ಡೌನ್ ಜಾರಿಯಲ್ಲಿರುವುದರಿಂದ ಈ ಬಾರಿ ಬಸವ ಜಯಂತಿಯನ್ನು ಮನೆಗಳಲ್ಲಿಯೇ ಸರಳವಾಗಿ ಹಾಗೂ ಅರ್ಥರ್ಪೂರ್ಣವಾಗಿ ಆಚರಿಸಬೇಕೆಂದು ಜಿ.ಪಂ.ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಕೋರಿದ್ದಾರೆ.

ಕೊರೊನಾ ವೈರಾಣು ಹರಡದಂತೆ ನೋಡಿಕೊಳ್ಳಲು ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದ ಈ ಬಾರಿ ಎಲ್ಲರೂ ಮನೆಯಲ್ಲೇ ಶರಣರ ವಚನ ಪಠಣ ಮಾಡುತ್ತ ಹಾಗೂ ಬಸವಾದಿ ಪ್ರಮಥರ ಆಚಾರ, ವಿಚಾರಗಳನ್ನು ವಿಶ್ವದಾದ್ಯಂತ ಪಸರಿಸುವ ಮೂಲಕ ಜಗತ್ತಿಗೆ ಸಮ ಸಮಾಜದ ಕನಸನ್ನು ಕಂಡಿದ್ದ ಬಸವೇಶ್ವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ವಿಶ್ವ ಗುರು ಬಸವೇಶ್ವರರ್ ಜಯಂತಿಯನ್ನು ಸರಳವಾಗಿ ಆಚರಿಸಬೇಕಾಗಿದೆ.

ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವಿಶ್ವಗುರು ಬಸವಣ್ಣನವರು ರಚಿಸಿದ ವಚನಗಳಲ್ಲಿನ ತತ್ವಾದರ್ಶ ಅಳವಡಿಸಿಕೊಳ್ಳೋಣ, ಹಾಗೆಯೇ ಜಗತ್ತಿನಿಂದ ಮಹಾಮಾರಿ ಕೊರೊನಾ ವೈರಸ್ ತೊಲಗಲಿ ಎಂದು ದೃಢಸಂಕಲ್ಪದೊಂದಿಗೆ ಪ್ರಾರ್ಥಿಸೋಣ ಎಂದು ಅಂಬಾರಾಯ ಅಷ್ಟಗಿ ಹೇಳಿದ್ದಾರೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago