ಬಿಸಿ ಬಿಸಿ ಸುದ್ದಿ

ಸಾವಳಗಿ (ಬಿ) ರಥೋತ್ಸವ ಹಿನ್ನೆಲೆ ಕರ್ತವ್ಯ ಲೋಪ: ಗ್ರಾಮ ಲೆಕ್ಕಾಧಿಕಾರಿ ಅಮಾನತ್ತು

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ತಡೆಯುವ ಹಿನ್ನೆಲೆಯಲ್ಲಿ ಲಾಕ್‍ಡಾನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯತನ, ಬೇಜವ್ದಾರಿತನ ಹಾಗೂ ಮೇಲಾಧಿಕಾರಿಗಳು ನೀಡಲಾದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಕರ್ತವ್ಯ ಲೋಪ ವೆಸಗಿದ ಹಿನ್ನೆಲೆಯಲ್ಲಿ ಸಾವಳಗಿ (ಬಿ) ಗ್ರಾಮಲೆಕ್ಕಾಧಿಕಾರಿ ಜಗದೀಶರೆಡ್ಡಿ ಇವರನ್ನು ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಲಾಕ್‍ಡಾನ್ ಹಾಗೂ 144 ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು, ಸಭೆ, ಸಮಾರಂಭ, ಜಾತ್ರೆ, ಉರುಸ್‍ಗಳನ್ನು ನಿಷೇಧಿಸಲಾಗಿತ್ತು. ಯಾವುದೇ ಜಾತ್ರೆಗಳನ್ನು ಜರುಗದಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿತ್ತು. ಆದರೆ ಕಲಬುರಗಿ ತಾಲೂಕಿನ ಪಟ್ಟಣ ಹೋಬಳಗಿಯ ಸಾವಳಗಿ(ಬಿ) ಗ್ರಾಮದಲ್ಲಿ 2020ರ ಏಪ್ರಿಲ್ 22ರ ಮಧ್ಯರಾತ್ರಿ ಅವಧಿಯಲ್ಲಿ ಶ್ರೀ ಶಿವಲಿಂಗೇಶ್ವರ ದೇವರ ಜಾತ್ರಾ ನಿಮಿತ್ತ ರಥೋತ್ಸವ ಜರುಗಿರುತ್ತದೆ. ಈ ಘಟನೆ ನಡೆದು 15 ದಿನಗಳಾದರೂ ಸಹ ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರದೇ ಕರ್ತವ್ಯ ಲೋಪ ವೆಸಗಿರುತ್ತಾರೆ.

ಕರ್ತವ್ಯ ಲೋಪÀ ವೆಸಗಿರುವ ಹಿನ್ನೆಲೆಯಲ್ಲಿ ಸದರಿ ನೌಕರರ ವಿರುದ್ಧ ವಿಚಾರಣೆ ಬಾಕಿ ಇರಿಸಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಗಳು 1957 ರ ನಿಯಮ (10)(1)(ಡಿ)ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.

ಕರ್ನಾಟಕ ಸೇವಾ ನಿಯಮಗಳು 1958ರ ನಿಯಮ 98ರ ಅನುಸಾರ ಸದರಿ ನೌಕರರು ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿದ್ದಾರೆ. ಸದರಿ ನೌಕರರು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿಗಳ ಅದೇಶದಲ್ಲಿ ತಿಳಿಸಲಾಗಿದೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago