ಕಲಬುರಗಿ: ಜಿಲ್ಲೆಯಲ್ಲಿ ಪ್ರತಿ ದಿನ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಅತಿ ಹೆಚ್ಚು ಸೋಂಕಿತರು ಇರುವ ಬಡಾವಣೆಗಳನ್ನು ಸಂಪರ್ಕಿಸುವ 95 ರಸ್ತೆಗಳನ್ನು ಸೀಲ್‌ಡೌನ್ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು 1 ಸಾವಿರ ಪತ್ರಾಸ್ ತರಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸೋಂಕು ಹರಡಿರುವ ಪ್ರದೇಶಗಳ ಸಿಲ್ ಡೌನ್ ಮಾಡಲಿರುವ ರಸ್ತೆಗಳನ್ನು ಗುರುತಿಸುವ ಕಾರ್ಯವನ್ನು ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರು ಆರಂಭಿಸಿದ್ದಾರೆ ಎನ್ನಲಾಗಿದೆ.
ಆಜಾದಪುರ, ಬುಲಂದ್ ಪರ್ವೇಜ್, ಕಾಲೊನಿ, ತಾಜ ನಗರ, ಹಾಗರಗಾ ಸರ್ಕಲ್, ರಫೀಕ್ ಚೌಕ್, ಕೆಸಿಟಿ ಕಾಲೇಜಿನಿಂದ ರಿಂಗ್ ರೋಡ್, ರಾಮಜಿ ನಗರದಿಂದ ಟಿನ್ನಿಪರ್ಲ್ ಶಾಲೆ, ಮಿಜಗುರಿ ಮುಖ್ಯರಸ್ತೆ, ಎಎಸ್‍ಎಂ ಆಸ್ಪತ್ರೆ ರಸ್ತೆ, ಚುನ್ನಾಭಟ್ಟಿ ರಸ್ತೆ, ನೂರ್‌ಭಾಗ್ ರಸ್ತೆ, ಯಾಕೂಬ್ ತಹಾರಿ, ಪ್ರಕಾಶ ಏಷಿಯನ್ ಮಾಲ್‍ದಿಂದ ನಗರೇಶ್ವರ ಶಾಲೆ, ಎಂ.ಬಿ. ನಗರ ಮುಖ್ಯರಸ್ತೆ, ಸಂತ್ರಾಸವಾಡಿ ಮಸೀದಿ ರಸ್ತೆ, ಬಸವೇಶ್ವರ ಕಾಲೊನಿ, ಜಿಡಿಎ ಲೇಔಟ್, ಖರ್ಗೆ ಪೆಟ್ರೋಲ್ ಬಂಕ್‍ದಿಂದ ನಗರದ ಹೊರಗೆ ಹೋಗುವ ಒಂದು ರಸ್ತೆ, ಸೇಡಂ ರಸ್ತೆಯ ವೀರೇಂದ್ರ ಪಾಟೀಲ ನಗರ ಪ್ರವೇಶ ದ್ವಾರ, ಹೀರಾಪುರದಿಂದ ಬಸ್ ನಿಲ್ದಾಣ ರಸ್ತೆ ಮಾರ್ಗವಾಗಿ ಮಿರ್ಚಿ ಗೋದಾಮು, ಗಂಗಾನಗರ ಹನುಮಾನ ಟೆಂಪಲ್ ರಸ್ತೆ ಹೀಗೆ 95ಕ್ಕೂ ಹೆಚ್ಚಿನ ರಸ್ತೆಗಳನ್ನು ಸೀಲ್‍ಡೌನ್ ಮಾಡುವ ಮೂಲಕ ಜನರ ಓಡಾಟವನ್ನು ನಿರ್ಬಂಧಿಸುವ ಸಾಧ್ಯತೆಗಳಿವೆ.
ರಾಜ್ಯದ ಕೆಲವೆಡೆ ಲಾಕ್‌ಡೌನ್ ಸಡಿಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಆದರೆ, ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, 36 ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ. ಇನ್ನೂ ಒಂದು ಸಾವಿರಕ್ಕೂ ಅಧಿಕ ಮಾದರಿಗಳ ತಪಾಸಣಾ ವರದಿಗಳು ಬರಬೇಕಿದೆ. ಹೀಗಾಗಿ, ರೆಡ್‌ಝೋನ್ ಪಟ್ಟಿಯಲ್ಲಿರುವ ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುವ ಸಂಭವ ಕಡಿಮೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…