ವಿಜಯಪುರ: ವಿಜಯಪುರದ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಬರ್ಬರವಾಗಿ ಕೊಲೆದ ರೀತಿಯಲ್ಲಿ ಜಿಲ್ಲೆ ಕೋಲ್ಹಾರ ತಾಲೂಕಿನ ಕೋಲ್ಹಾರ ಸೇತುವೆ ಕೆಳಗೆ ಶವ ಪತ್ತೆ ಯಾಗಿರುವ ಘಟನೆ ನಡೆದಿದೆ.
ಜೆಡಿಎಸ್ ನ ಮಾಜಿ ಜಿಲ್ಲಾಧ್ಯಕ್ಷೆ ಹಾಲಿ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಶವ ಪತ್ತೆಯಾಗಿದ್ದು, ಕೋಲ್ಹಾರ ಬಳಿಯ ಕೃಷ್ಣಾ ನದಿಯ ಹತ್ತಿರ ಅನುಮಾನಸ್ಪದವಾಗಿ ಶವ ಸಿಕ್ಕಿದೆ. ಕಳೆದ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಕಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು. ಕೊಲೆಗೆ ನೀಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಡಿವೈಎಸ್ಪಿ.ಎಸ್.ಯು ಮಹೇಶಗೌಡ, ಸೇರಿದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿಜಯಪುರ ಪೊಲೀಸ್ ತನಿಖೆ ನಡೆಸುತ್ತಿದ್ದಾರೆ.
ಈ ಮೊದಲು ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದ ರೇಷ್ಮಾ ಪಡೇಕನೂರ. 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು. ಕಳೆದ ಚುನಾವಣೆ ವೇಳೆ ವಿಜಯಪುರದ ಆಕಾಂಕ್ಷಿ ಆಗಿದ್ದು, ಟಿಕೇಟ್ ಸಿಗದ ಹಿನ್ನೆಲೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದರು.