ಕಲಬುರಗಿ: ಈ ಹಿಂದೆ ಪೊಲೀಸ್ ಅಧಿಕಾರಿಯಾಗಿದ್ದ ಬಿಜೆಪಿ ಶಾಸಕ ಪಿ.ರಾಜೀವ್ ಕೂಡ ಚುನಾವಣೆ ಸಂದರ್ಭದಲ್ಲಿ ಪೊಲೀಸ್ ವಾಹನದಲ್ಲಿ ಹಣ ಸಾಗಿಸುತ್ತಿದ್ದರೇ ? ಎಂದು ಸಮಾಜ ಕಲ್ಯಾಣ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೊಲೀಸ್ ಇಲಾಖೆಯಲ್ಲಿದ್ದ ಕಾರಣ ಶಾಸಕರಾಗಿ ಆಯ್ಕೆಯಾದ ರಾಜೀವ್ ಅವರು ಅದೇ ಪೊಲೀಸ್ ಇಲಾಖೆ ಕುರಿತು ಅವಮಾನಕರ ಹೇಳಿಕೆ ನೀಡಿದ್ದು ಈ ಕೂಡಲೇ ಅವರು ಇಲಾಖೆಯ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಪೊಲೀಸ್ ವಾಹನದಲ್ಲಿ ಹಣ ಸಾಗಿಸಲಾಗುತ್ತಿದೆ ಎನ್ನುವ ಅವರ ಹೇಳಿಕೆ ಜಿಲ್ಲೆಯ ಪೊಲೀಸರ ಆತ್ಮಗೌರವಕ್ಕೆ ಧಕ್ಕೆತರುವಂತಿದೆ ಎಂದ ಪ್ರಿಯಾಂಕ್ ಖರ್ಗೆ ಅವರು ರಾಜೀವ ಅವರು ಕೂಡ ಪೊಲೀಸ್ ಇಲಾಖೆಯಲ್ಲಿದ್ದಾಗ ಹಾಗೆ ಹಣ ಸಾಗಿಸುತ್ತಿದ್ದರಾ? ಎಂದು ಪ್ರಶ್ನಿಸಿದರು. ಜಿಲ್ಲೆಯ ಪೊಲೀಸರು ತಮ್ಮ ಕರ್ತವ್ಯದಿಂದ ಹೆಸರುವಾಸಿಯಾಗಿದ್ದು ಚುನಾವಣಾ ಆಯೋಗದ ಆದೇಶದಂತೆ ಕಾರ್ಯನಿರ್ಹಹಿಸುತ್ತಿದ್ದು ಚೆಕ್ ಪೋಸ್ಟ್ಗಳಲ್ಲಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಶಾಸಕರು ಇಂತಹ ಹೇಳಿಕೆ ನೀಡುವ ಮೂಲಕ ಅವರ ಕರ್ತವ್ಯವನ್ನೇ ಅವಮಾನಿಸುವುದರ ಜೊತೆಗೆ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದರು.
ಪೊಲೀಸರ ಹಿತ ಕಾಪಾಡಿ ಹಾಗೂ ರಕ್ಷಣೆ ಮಾಡುವ ಕೆಲಸ ಮಾಡಬೇಕಿದ್ದ ಶಾಸಕರು ಪೊಲೀಸ್ ಇಲಾಖೆಯ ವಿರುದ್ದ ಅಪಮಾನಕರ ಹೇಳಿಕೆ ನೀಡುವ ಮೂಲಕ ಇಲಾಖೆಯ ಅಧಿಕಾರಿಗಳ ಕರ್ತವ್ಯನಿಷ್ಠೆಯನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ. ಇದು ಅವರ ಮೇಲೆ ಕೆಲಸದ ಮೇಲೆ ಪರಿಣಾಮ ಬೀರಿದೆ. ಹಾಗಾಗಿ, ರಾಜೀವ್ ಅವರು ಈ ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಪೋಲಿಸರ ಕ್ಷಮೆ ಕೇಳಲಿ ಎಂದು ಒತ್ತಿ ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…