ಬಿಸಿ ಬಿಸಿ ಸುದ್ದಿ

ಇನ್ಫೋಸಿಸ್ ಫೌಂಡೇಶನ್‌ ನಿಂದ ಜಯನಗರದಲ್ಲಿ ದಿನಸಿ ಸಾಮಗ್ರಿಗಳ ವಿತರಣೆ

ಬೆಂಗಳೂರು: ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಇಂದು ಬೆಂಗಳೂರಿನ ಜಯನಗರದ ಸಾವಿರಾರು ಕುಟುಂಬಗಳಿಗೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.

ಕರೋನಾ ಕರ್ಪ್ಯೂನಿಂದ ತೊಂದರೆಗೀಡಾಗಿರುವ ಕಾರ್ಮಿಕರು, ನಿರ್ಗತಿಕರು ಹಾಗೂ ಕೊಳೆಗೇರಿ ನಿವಾಸಿಗಳು ಸೇರಿದಂತೆ ಸಂತ್ರಸ್ತರಿಗೆ ಇಂದು ಜಯನಗರದಲ್ಲಿ ಇನ್ಪೋಸಿಸ್‌ ಫೌಂಡೇಶನ್‌ ನ ರಮೇಶ್‌ ರೆಡ್ಡಿ ಹಾಗೂ ಅವರ ತಂಡ ಸಾವಿರಕ್ಕೂ ಹೆಚ್ಚು ಜನರಿಗೆ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವಂತಹ ಬಾಕ್ಸನ್ನು ವಿತರಿಸಿದರು. ಬಿಪಿಎಲ್‌ ಕಾರ್ಡ್‌ ಇಲ್ಲದ ಜನರಿಗೆ ಈ ಕಿಟ್‌ ಗಳನ್ನು ವಿತರಿಸಿದ್ದು ವಿಶೇಷವಾಗಿತ್ತು.

ಅಲ್ಲದೆ, ಮನೆ ಮನೆಗೂ ತೆರಳಿ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್‌ಗಳನ್ನೂ ವಿತರಿಸಲಾಯಿತು. ಸಾವಿರಕ್ಕೂ ಹೆಚ್ಚು ಜನರು ಈ ವಸ್ತುಗಳನ್ನು ಪಡೆದುಕೊಂಡರು. ಕರೋನಾ ಲಾಕ್‌ ಡೌನ್‌ ಪ್ರಾರಂಭದಿಂದಲೂ ಇನ್ಪೋಸಿಸ್‌ ಫೌಂಡೇಶನ್‌ ರಾಜ್ಯಾದ್ಯಂತ ಅಗತ್ಯ ಸಾಮಗ್ರಿಗಳನ್ನು ವಿತರಿಸುತ್ತಿದೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago