ಶಹಾಬಾದ: ನಗರಸಭೆಯ ಪೌರಕಾರ್ಮಿಕರಿಗೆ ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಪೌರ ಸಭೆಯ ಆಯುಕ್ತ ವೆಂಕಟೇಶ ಅವರು ಶುಕ್ರವಾರ ಮಾಸ್ಕ್ ಹಾಗೂ ಸ್ಯಾನಿಟೈಜರ್‍ಗಳನ್ನು ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ವೆಂಕಟೇಶ, ಕರೊನಾ ವೈರಸ್ ಎಂದಿನಿಂದ ಪ್ರಾರಂಭವಾಯಿತೋ ಅಂದಿನಿಂದ ನಮ್ಮ ನಗರಸಭೆಯ ಪೌರಾಯುಕ್ತರು ತಮ್ಮ ಆರೋಗ್ಯ ಬಗ್ಗೆ ಚಿಂತಿಸದೇ ಜನರ ಆರೋಗ್ಯ ಕಾಪಾಡಲು ಅವಿರತವಾಗಿ ದುಡಿಯುತ್ತಿದ್ದಾರೆ.ಅವರಿಗೆ ವೈರಸ್ ತಗುಲದಂತೆ ಮುಂಜಾಗೃತ ಕ್ರಮವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣೆ ಮಾಡಿದ್ದೆವೆ. ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪೌರಕಾರ್ಮಿಕರು ಮಾಸ್ಕ್, ಕೈಚೀಲಗಳನ್ನು ಹಾಕಿಕೊಂಡು ಕೆಲಸ ಮಾಡಿ. ನಂತರ ಕೈಗಳಿಗೆ ಸ್ಯಾನಿಟೈಜರ್ ಹಚ್ಚಿಕೊಳ್ಳಿ. ಸೋಪ್‍ನಿಂದ ಚೆನ್ನಾಗಿ ಕೈತೊಳೆದುಕೊಳ್ಳಿ ಎಂದು ತಿಳಿಸಿದರು.
ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಕಿರಿಯ ಆರೋಗ್ಯ ನಿರೀಕ್ಷಕ ರಾಜೇಶ, ಶರಣು, ಹುಣೇಶ, ಅನೀಲ,ಈರಣ್ಣ ಕುರಿ, ಹಣಮಂತ ಪವಾರ ಸೇರಿದಂತೆ ಅನೇಕ ಪೌರಾಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…