ಕಲಬುರಗಿ: ಮಹಾಮಾರಿ ಕೊರೋನಾ ಅಟ್ಟಹಾಸ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಣಂತಿ ಹಾಗೂ ನವಜಾತ ಶಿಶುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಸಂಸದ ಡಾ. ಉಮೇಶ್ ಜಾಧವ್ ಅವರು ಮಾನವೀಯತೆ ಮೆರೆದ ಘಟನೆ ಶನಿವಾರ ವರದಿಯಾಗಿದೆ.
ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದ ಅಕ್ಷತಾ ಗಂಡ ಸಂಗಣ್ಣ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಗು ಜನಿಸಿತು. ಈ ಸಂದರ್ಭದಲ್ಲಿ ಮಹಿಳೆಗೆ ತೀವ್ರ ರಕ್ತಸ್ರಾವವಾದಾಗ ಆಕೆಯನ್ನು ಅಂಬುಲೆನ್ಸ್‌ನಲ್ಲಿ ನಗರಕ್ಕೆ ಕರೆತರಲಾಯಿತು. ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಸಂಚರಿಸುತ್ತಿರುವುದು ಸಂಸದ ಡಾ. ಉಮೇಶ್ ಜಾಧವ್ ಅವರ ಗಮನಕ್ಕೆ ಬಂದು ತಕ್ಷಣವೇ ಬಾಣಂತಿ ಹಾಗೂ ಮಗುವನ್ನು ಸಂಗಮೇಶ್ವರ್ ಆಸ್ಪತ್ರೆಗೆ ಸೇರಿಸಿದರು.
ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗು ಸುರಕ್ಷಿತವಾಗಿದ್ದು, ಆರೋಗ್ಯದಿಂದ ಇದ್ದಾರೆ. ಸಕಾಲದಲ್ಲಿ ಸಂಸದ ಡಾ. ಉಮೇಶ್ ಜಾಧವ್ ಅವರು ಆಸ್ಪತ್ರೆಗೆ ಸೇರಿಸಿದ್ದರಿಂದ ಮಹಿಳೆಯ ಮನೆಯವರು ಸಂಸದರನ್ನು ಮನದುಂಬಿ ಕೊಂಡಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…