ಕಲಬುರಗಿ: ಮಹಾ ಮಾನವತಾವಾದಿ ಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರ ಅವರ ಜಯಂತಿ ನಿಮಿತ್ಯ ರವಿವಾರ ನಗರದ ಜಗತ್ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ 12ನೇ ಶತಮಾನದ ಸಾಮಾಜಿಕ ಹರಿಕಾರನಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಜಿಲ್ಲಾಡಳಿತದಿಂದ ಸರಳವಾಗಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಶಾಸಕ ಡಾ.ಅಜಯ ಸಿಂಗ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಗೋಪಾಲಕೃಷ್ಣ ಬಿ. ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಅವರು ಸಹ ಮಹಾನ್ ದಾರ್ಶನಿಕನಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…