ಬಿಸಿ ಬಿಸಿ ಸುದ್ದಿ

ಕುಲಪತಿ ಡಾ. ನಿರಂಜನ ನಿಷ್ಟಿ ಅವರಿಗೆ ಸನ್ಮಾನ

ಕಲಬುರಗಿ: ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ ನಿಷ್ಟಿ ಅವರಿಗೆ ವಿಶ್ವವಿದ್ಯಾಲಯದ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಸನ್ಮಾನಿಸಿದರು. ವಿಶ್ವವಿದ್ಯಾಲಯವು ಇತ್ತೀಚಿಗೆ ಎಐಸಿಟಿಇಯಿಂದ ತನ್ನ ಎಲ್ಲ ಕೋರ್ಸಗಳಿಗೆ ಮಾನ್ಯತೆ ಪಡೆದ ಪ್ರಯುಕ್ತ ಡಾ. ನಿರಂಜನ ನಿಷ್ಟಿ ಅವರನ್ನು ಸನ್ಮಾನಿಸಲಾಯಿತು.

ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಕುಲಪತಿಗಳಾದ ಡಾ. ನಿರಂಜನ ನಿಷ್ಟಿ ಅವರು, ಮಾನ್ಯತೆ ಪಡೆಯಲು ಶರಣಬಸವ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗ ನಿರಂತರವಾಗಿ ಶ್ರಮವಹಿಸಿದ್ದಾರೆ ಅವರೆಲ್ಲರಿಗೂ ಅಭಿನಂದನೆ ತಿಳಿಸಿದರು.

ಕುಲಾಧಿಪತಿಗಳಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರ ಸೂಕ್ತ ಮಾರ್ಗದರ್ಶನ ಮತ್ತು ಸಲಹೆಯ ಕಾರಣದಿಂದ ಕಡಿಮೆ ಅವಧಿಯಲ್ಲಿ ವಿಶ್ವವಿದ್ಯಾಲಯವು ತಾನು ಆರಂಭಿಸಿರುವ ಎಲ್ಲ ಕೋರ್ಸಗಳಿಗೆ ಎಐಸಿಟಿಇಯಿಂದ ಮಾನ್ಯತೆ ಪಡೆಯಲು ಸಾಧ್ಯವಾಗಿದೆ ಎಂದರು.

ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಸಮ ಕುಲಪತಿ ಡಾ. ವಿ ಡಿ ಮೈತ್ರಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥಟಿ ವಿ ಶಿವಾನಂದನ ಮಾತನಾಡಿದರು. ಡೀನ್ ಡಾ. ಲಕ್ಷ್ಮೀ ಮಾಕಾ, ಬಸವರಾಜ ಮಠಪತಿ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago