ಕಲಬುರಗಿ: ಓರಿಸ್ಸಾ ರಾಜ್ಯದಲ್ಲಿ ಫನಿ ಚಂಡಮಾರುತದಿಂದ ಅಸ್ತವ್ಯಸ್ತಗೊಂಡ ವಿದ್ಯುತ್ ಮಾರ್ಗವನ್ನು ಸರಿಪಡಿಸಿ ಪುನರ್ ವಿದ್ಯುತ್ ಸಂಪರ್ಕ ಕಲ್ಪಿಸಲು ರಾಜ್ಯ ಸರ್ಕಾರದ ನಿರ್ದೇಶನದಂತೆ ಜೆಸ್ಕಾಂದಿಂದ ೧೦೫ ಅಧಿಕಾರಿ ಸಿಬ್ಬಂದಿಗೆ ಓರಿಸ್ಸಾ ರಾಜ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದು, ಗುರುವಾರ ಅವರಿಗೆ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಾ. ಆರ್. ರಾಗಪ್ರಿಯಾ ಹಸಿರು ಬಾವುಟ ತೋರಿಸುವ ಮೂಲಕ ಬೀಳ್ಕೋಟ್ಟರು.
ನಿಯೋಜನೆ ಮೇರೆಗೆ ತೆರಳಲಿರುವ ಅಧಿಕಾರಿ ಹಾಗೂ ಪವರ್‌ಮೆನ್‌ನ್ನೊಳಗೊಂಡ ಒಟ್ಟು ೧೦೫ ಸಿಬ್ಬಂದಿಗಳು ಜೆಸ್ಕಾಂ ಮತ್ತು ಕರ್ನಾಟಕ ರಾಜ್ಯಕ್ಕೆ ಗೌರವ ತರುವಂತೆ ಒಳ್ಳೆಯ ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಬೇಕೆಂದರು. ಈ ಸಂದರ್ಭದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೈಯುಕ್ತಿಕ ಸುರಕ್ಷತೆಗಾಗಿ ಸುರಕ್ಷಾ ಸಲಕರಣೆಗಳು, ಟೂಲ್ ಕಿಟ್ ಸೇರಿದಂತೆ ಮತ್ತಿತರ ಕಿಟ್‌ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜೆಸ್ಕಾಂನ ತಾಂತ್ರಿಕ ನಿರ್ದೇಶಕ ವಿನೋದ ಜಿ. ಹಾವಣಗಿ, ಆಡಳಿತ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಪ್ರಧಾನ ವ್ಯವಸ್ಥಾಪಕರಾದ ಶೀಲವಂತ ಶಿವಕುಮಾರ, ಮುಖ್ಯ ಇಂಜಿನಿಯರ್ ಸುನಂದಾ ಜೋಶಿ, ಅಧೀಕ್ಷಕ ಇಂಜಿನಿಯರ್ ಮೋಹನಕುಮಾರ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…