ಕಲಬುರಗಿ: ಒಂದು ನೂರು ಅಥವಾ ಅದಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಕಾರ್ಖಾನೆ ಮತ್ತು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಪಿ.ಎಪ್ ವಂತಿಗೆಯನ್ನು ಕೇಂದ್ರ ಸರಕಾರವೇ ಭರಿಸಲಿದೆ ಎಂದು ಕಲಬುರಗಿ ಪ್ರಾದೇಶಿಕ ಪಿ.ಎಪ್ ಕಚೇರಿ ಸಹಾಯಕ ಆಯುಕ್ತ ಸುಪ್ರತಿಕ ದಾಶ ತಿಳಿಸಿದ್ದಾರೆ.
90 ಪ್ರತಿಶತ ಉದ್ಯೋಗಿಗಳ ತಿಂಗಳ ವೇತನ 15,000/- ರೂ. ಗಿಂತ ಕಡಿಮೆ ಇರಬೇಕು, 100 ಪ್ರತಿಶತ ಉದ್ಯೋಗಿಗಳ ಕೆ.ವೈ.ಸಿ (KYC-Aadhar) ಮತ್ತು ಉದ್ಯೋಗದಾತರ ಪೂರ್ಣ ಮಾಹಿತಿ ಎಲೆಕ್ಟ್ರಾನಿಕ್ ಮುಖಾಂತರ (ಪಾರ್ಮ- 5ಎ) ನಮೂದಿಸಿರಬೇಕು. ಇಂತಹ ಉದ್ಯೋಗಿಗಳ ವೇತನದ ಶೇ. 24 ರಷ್ಟು ಪಿ.ಎಪ್ ವಂತಿಗೆಯನ್ನು ಕೇಂದ್ರ ಸರಕಾರ ಮೂರು ತಿಂಗಳವರೆಗೆ ಪಾವತಿಸಲಿದೆ.
ಪರಿಹಾರ ಪ್ರಕ್ರಿಯೆ ಮತ್ತು ಕಾರ್ಯವಿಧಾನಗಳನ್ನು ಒಳಗೊಂಡ ತಂತ್ರಾಂಶವನ್ನು ಇಪಿಎಪ್ಓ ಎಲೆಕ್ಟ್ರಾನಿಕ್ ಚಲನ್-ಕಮ್-ರಿಟರ್ನ (ಇ.ಸಿ.ಆರ್) ವ್ಯವಸ್ಥೆ ಜಾರಿಗೊಳಿಸಿದ್ದು. ಈ ವ್ಯವಸ್ಥೆಯು ಸಂಬಂಧಪಟ್ಟ ಕಾರ್ಖಾನೆಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಪರಿಹಾರವನ್ನು ಪಡೆಯಲು ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಇ.ಪಿ.ಎಪ್.ಓ ಕೋವಿಡ-19 ಟ್ಯಾಬ್‌ನಲ್ಲಿ ಗಮನಿಸಬಹುದು ಎಂದು ತಿಳಿಸಿದ್ದಾರೆ.
ಈಗಾಗಲೇ ಭವಿಷ್ಯ ನಿಧಿ ಕಚೇರಿಯ ಮುಖಾಂತರ ಅರ್ಹ ಉದ್ಯೋಗದಾತರಿಗೆ ಇ-ಮೇಲ್ ಮೂಲಕ ಸಂದೇಶವನ್ನು ರವಾನಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕಾರ್ಯಾಲಯದ ದೂರವಾಣಿ ಸಂಖ್ಯೆ 08472-283204/273205 ಮತ್ತು ಇ-ಮೇಲ್ ro.gulbarga@epfindia.gov.in ಸಂಪರ್ಕಿಸಬಹುದು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…