ಬಿಸಿ ಬಿಸಿ ಸುದ್ದಿ

ಹೊರರಾಜ್ಯದ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ದರದಂತೆ ಪಡಿತರ ವಿತರಣೆ

ಕಲಬುರಗಿ: ಕೇಂದ್ರ ಸರ್ಕಾರದ ನಿಯಮದಂತೆ ಕರ್ನಾಟಕ ರಾಜ್ಯದವರಲ್ಲದ ಹೊರರಾಜ್ಯಗಳಲ್ಲಿ ವಾಸಿಸುವ ಪಡಿತರ ಚೀಟಿದಾರರಿಗೆ ಉಚಿತವಾಗಿ ಪಡಿತರ ಆಹಾರಧಾನ್ಯಗಳನ್ನು ವಿತರಿಸಲು ಅವಕಾಶ ಇರುವುದಿಲ್ಲ. ಆದರೆ ಎನ್.ಎಫ್.ಎಸ್.ಎ. ದರದಂತೆ ಕರ್ನಾಟಕ ರಾಜ್ಯದವರಲ್ಲದ ಹೊರರಾಜ್ಯದ ಪ್ರತಿ ಎಎವೈ ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ. ಅಕ್ಕಿಗೆ 3 ರೂ. ದರದಂತೆ 35 ಕೆ.ಜಿ ಅಕ್ಕಿ ಹಾಗೂ ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ. ಅರ್ಹ ಹೊರರಾಜ್ಯದ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಹೊರರಾಜ್ಯದ ಪಡಿತರ ಪಡೆಯುವ ಪಡಿತರ ಚೀಟಿದಾರರ ಚೀಟಿ ಸಂಖ್ಯೆಯನ್ನು ನ್ಯಾಯಬೆಲೆ ಅಂಗಡಿಯಲ್ಲಿನ ತಂತ್ರಾಂಶದಲ್ಲಿ ನಮೂದಿಸಿ, ಕೇಂದ್ರ ಸರ್ಕಾರದ ದತ್ತಾಂಶದಲ್ಲಿ ಈ ಮಾಹಿತಿಯನ್ನು ಪರಿಶೀಲಿಸಿ, ನಂತರ ಪಡಿತರ ಚೀಟಿದಾರರು ಸದರಿ ಮಾಹೆಯಲ್ಲಿ ಪಡಿತರ ಎತ್ತುವಳಿ ಮಾಡಲಾಗಿದೆಯೇ ಅಥವಾ ಇಲ್ಲವೆಂಬುದನ್ನು ಪರಿಶೀಲಿಸಲಾಗುತ್ತದೆ. ಪಡಿತರವನ್ನು ಎತ್ತುವಳಿ ಮಾಡದೇ ಇದ್ದಲ್ಲಿ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಿಸಲು ಅನುಮತಿಯನ್ನು ನೀಡಲಾಗುತ್ತದೆ. ಮೂಲ ಸ್ಥಳದಲ್ಲಿ ಪಡಿತರ ಎತ್ತುವಳಿ ಮಾಡಿದ್ದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆಗೆ ಅವಕಾಶ ಇರುವುದಿಲ್ಲ. ಪಡಿತರ ಪಡೆಯಲು ಅರ್ಹರಿರುವ ಪಡಿತರ ಚೀಟಿದಾರರು ತಮ್ಮ ಆಧಾರ್ ದೃಢೀಕೃತ ಬರಳಚ್ಚು ಬಯೋಮೆಟ್ರಿಕ್ ಅಥವಾ ಓಟಿಪಿ ಮೂಲಕವೇ ಪಡಿತರ ಪಡೆಯಬೇಕು.

ಹೊರ ರಾಜ್ಯದ ಕಾರ್ಮಿಕರು/ಕುಶಲಕರ್ಮಿಗಳು ಕಾರ್ಯನಿರ್ವಹಿಸುವ ಕಾರ್ಖಾನೆಗಳು ಅಥವಾ ಸಂಸ್ಥೆಗಳ ಮಾಲೀಕರು, ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯದ ನ್ಯಾಯಬೆಲೆ ಅಂಗಡಿಗಳಿಂದಲೇ ಆಹಾರಧಾನ್ಯವನ್ನು ಪಡೆಯಬೇಕೆಂದು ಕಾರ್ಮಿಕರು/ಕುಶಲಕರ್ಮಿರಲ್ಲಿ ತಿಳುವಳಿಕೆ ಮೂಡಿಸಬೇಕು. ಇದಲ್ಲದೇ ಹೊರರಾಜ್ಯದ ಪಡಿತರ ಚೀಟಿದಾರರು ಪಡಿತರ ಪಡೆಯಲು ಗ್ರಾಮ ಪಂಚಾಯತಿ ಮತ್ತು ಸ್ಥಳಿಯ ಸಂಸ್ಥೆಗಳ ಮೂಲಕ ತಿಳುವಳಿಕೆ ಮೂಡಿಸಬೇಕು.

ಕೇಂದ್ರ ಸರ್ಕಾರವು “ಒಂದು ದೇಶ ಒಂದು ಪಡಿತರ ಚೀಟಿ” ಯೋಜನೆಯಡಿ ಹೊರ ರಾಜ್ಯಗಳಲ್ಲಿ ವಾಸಿಸುವ ಪಡಿತರ ಚೀಟಿದಾರರಿಗೆ ಮೂಲ ರಾಜ್ಯದ ಪಡಿತರ ಚೀಟಿಯ ಆಧಾರದ ಮೇಲೆ ಅವರು ವಾಸಿಸುತ್ತಿರುವ ರಾಜ್ಯಗಳಲ್ಲಿನ ನ್ಯಾಯಬೆಲೆ ಅಂಗಡಿಗಳ ಮೂಲಕ Portability ಅಡಿ ಪಡಿತರ ವಿತರಣೆ ಮಾಡಲು ಅಗತ್ಯವಿರುವ ಆಹಾರಧಾನ್ಯವನ್ನು ರಾಜ್ಯಕ್ಕೆ ಬಿಡುಗಡೆಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago