ಕಲಬುರಗಿ: ಕೊರೋನಾ ವೈರಸ್ (ಕೋವಿಡ್ ೧೯) ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಲೂಕು ಆಡಳಿತ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಭೆ ನಡೆಸಿ ಸರ್ಕಾರದ ನಿಯಮಗಳನ್ನು ಪಾಲಿಸಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ತಾಪುರ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡುತ್ತಾ ನಮ್ಮ ಕಡೆಯಿಂದ 3,000 ಆಹಾರ ಕಿಟ್ ಕೊಡುತ್ತಿದ್ದು ಇದರ ಸದುಪಯೋಗ ತಾಲೂಕಿನಲ್ಲಿ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಕಿಟ್ ವಿತರಣೆ ಮಾಡಿ, ಹಾಗೂ ತಾಲೂಕಿನಲ್ಲಿ ಹಾಗೂ ಹಳ್ಳಿಗಳಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ ಎಂದು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಹೇಳಿದರು.
ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯ ಮಾರಾಟ ನಿಷೇಧವನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡುತ್ತಿಲ್ಲ, ಅಂಗಡಿಗಳ,ಮನೆಗಳ ಹಿಂದಿನಿಂದ,ಮುಂದಿನಿಂದ ಮಧ್ಯ ಮಾರಾಟವಾಗುತ್ತಿದೆ. ಕೂಡಲೇ ತಾಲೂಕಿನ ಹಾಗೂ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ಹಾಗೂ ಕಳ್ಳಬಟ್ಟಿಯನ್ನು ನಿಯಂತ್ರಿಸಿ ಸರ್ಕಾರದ ಆದೇಶವನ್ನು ಪಾಲಿಸಿ ಎಂದು ಅಬಕಾರಿ ಸಿಪಿಐ ಓಂಪ್ರಕಾಶ್ ಅವರಿಗೆ ತಿಳಿಸಿದರು.
ಸರಕಾರ ಜಾರಿಗೆ ತಂದಿರುವೆ ಲಾಕ್ ಡೌನ್ ನಿಯಮಾವಳಿಗಳನ್ನು ಹಾಗೂ ಸಮಾಜಿಕ ಅಂತರ ಕಾಯ್ದುಕೊಳ್ಳಲು ಜನರಿಗೆ ತಿಳಿಹೇಳಬೇಕು ಈ ನಿಟ್ಟಿನಲ್ಲಿ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಕಾನೂನು ಮೀರಿ ಯಾರಾದರೂ ವರ್ತಿಸಿದರೆ ಅವರ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರಿಗೆ ಹೇಳಿದರು.
ಪುರಸಭೆ ಅಧಿಕಾರಿಗಳು ತಾಲೂಕು ಕೇಂದ್ರ ಹಾಗೂ ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾರ್ಡುಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪೌರಕಾರ್ಮಿಕರ ಸುರಕ್ಷತೆ ಹಾಗೂ ಅವರ ಆರೋಗ್ಯ ಕಾಳಜಿಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಸಲಕರಣೆ ನೀಡಿ ಹಾಗೂ ಇನ್ನು ಏನಾದರೂ ಬೇಕಾಗಿದ್ದರೆ ನಮ್ಮ ಗಮನಕ್ಕೆ ತನ್ನಿ.
ಸ್ಕ್ಯಾನರ್ ಗಳನ್ನು ಪರಿಶೀಲಿಸಿ ಸ್ಥಳದಲ್ಲಿಯೇ ಶಾಸಕರು ಸಿಪಿಐ ಪಂಚಾಕ್ಷರಿ ಸಾಲಿಮಠ್ ಅವರಿಗೆ ಪರೀಕ್ಷಿಸಿ ನಂತರದಲ್ಲಿ 10 ಗುಣಮಟ್ಟದ ಸ್ಕ್ಯಾನರನ್ನು ಆರೋಗ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಉಮಾಕಾಂತ ಹಳ್ಳೆ, ತಾಲೂಕು ಪಂಚಾಯಿತ ಇಓ ಅನಿತಾ ಪೂಜಾರಿ, ಸಿಪಿಐ ಪಂಚಾಕ್ಷರಿ ಸಾಲಿಮಠ್, ತಾಲೂಕು ಪಂಚಾಯತ್ ಅಧ್ಯಕ್ಷ ಜಗನಗೌಡ ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಶಿವರುದ್ರ ಬೇಣಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಹರೀ ಚವ್ಹಾಣ, ತಾಲೂಕ ಅಧಿಕಾರಿಗಳಾದ ತೋಟಗಾರಿಕೆ ಇಲಾಖೆ ಅಧಿಕಾರಿ ಸಿದ್ರಾಮ, ಪಶು ಇಲಾಖೆ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್, ಪುರಸಭೆ ಅಧಿಕಾರಿ ಮನೋಜ್ ಕುಮಾರ್ ಗುರಿಕಾರ್, ಹಿಂದುಳಿದ ವರ್ಗಗಳ ವಿಸ್ತೀರ್ಣಾ ಅಧಿಕಾರಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಿರೀಶ್ ರಂಜೋಳಕಾರ್, ಸೇರಿದಂತೆ ಇತರ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…