ಕಲಬುರಗಿ: ಇಲ್ಲಿನ ಚಿಂಚೋಳಿ ತಾಲ್ಲೂಕಿನ ಅಲ್ಲಾಹಪುರ ಗ್ರಾಮದ ಹತ್ತಿರ ಓರ್ವ ಕೂಲಿ ಕಾರ್ಮಿಕನಿಗೆ ಸಿಡಿಲು ಬಡೆದು ಸಾವನಪ್ಪಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ.
ಅನೀಲ್ ಚಂದ್ರಶೇಟಿ (23) ಸಿಡಿಲಿಗೆ ಬಲಿಯಾದ ಯುವಕ, ಅನೀಲ್ ಕೊಡ್ಲಿ ಗ್ರಾಮದ ನಿವಾಸಿಯಾಗಿದ್ದು, ಇಂದು ಸಂಜೆ ವೇಳೆಯಲ್ಲಿ ಮಳೆ ಮತ್ತು ಸಿಡಿಲಿನ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ ಸಂದರ್ಭದಲ್ಲಿ ಸಿಡಿಲು ಬಡೆದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಿಂಚೋಳಿ ತಹಶೀಲ್ದಾರ ಮತ್ತು ಶಾಸಕ ಅವಿನಾಶ್ ಜಾಧವ್ ಅವರು ಭೇಟಿ ನೀಡಿದ್ದು, ಈ ವೇಳೆಯಲ್ಲಿ ರಟಕಲ್ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಶಂಕರ್ ಸುಬೇದಾರ್, ಸಿಪಿಐ ವಿಜಯ ಬಿ ಮಠಪತಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಇದೇ ರೀತಿ ಜಿಲ್ಲೆಯ ಕಮಲಾಪುರ ತಾಲೂಕಿನ ಭುಯ್ಯಾಂರ ಗ್ರಾಮದ ಘಟನೆಯಲ್ಲಿ ಸುಭಾಷ್ ಹಳಕೇರಿ 35 ಕುಪ್ಪಣ್ಣ ನವಲೆ 58 ಸಿಡಿಲಿಗೆ ಬಲಿಯಾಗಿದ್ದಾರೆ.
ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…