ವಿವಿಧ ಕಡೆಗಳಲ್ಲಿ ಅಬಕಾರಿ ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿ ಜಪ್ತಿ

0
56

ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಕಲಬುರಗಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಮಹ್ಮದ್ ಇಸ್ಮಾಯಿಲ್ ಇನಾಮದಾರ ಇವರ ನೇತೃತ್ವದಲ್ಲಿ ಕಲಬುರಗಿ ಉಪ ವಿಭಾಗ ವಲಯ ನಂ.1ರ ಕಚೇರಿಯ ಅಬಕಾರಿ ನಿರೀಕ್ಷಕ, ಅಬಕಾರಿ ಉಪ ನಿರೀಕ್ಷಕರನ್ನೊಳಗೊಂಡ ಸಿಬ್ಬಂದಿಗಳು ಕೆಳಕಂಡ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿ ಹಾಗೂ ವಾಹನವನ್ನು ಜಪ್ತಿಪಡಿಸಿದ್ದಾರೆ ಎಂದು ಕಲಬುರಗಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂದೂರದಿಂದ ಕುಸನೂರಕ್ಕೆ ಹೋಗುವ ರಸ್ತೆಯಲ್ಲಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಮಂಗಳವಾರದಂದು ವಾಹನ ತಪಾಸಣೆ ನಡೆಸುವಾಗ ಅಟೋ ರಿಕ್ಷಾ ವಾಹನದಲ್ಲಿ 5 ಲೀಟರ ಕಳ್ಳಭಟ್ಟಿ ಸರಾಯಿ ಸಾಗಾಣಿಕೆ ಮಾಡುತ್ತಿರುವದನ್ನು ಪತ್ತೆ ಹಚ್ಚಿ ಕಳ್ಳಭಟ್ಟಿ ಸರಾಯಿ ಮತ್ತು ಆಟೋರಿಕ್ಷಾ ವಾಹನವನ್ನು ಜಪ್ತಿಪಡಿಸಲಾಗಿದೆ. ಪರಾರಿಯಾದ ಆರೋಪಿಯ ವಿರುದ್ಧ ಕಲಬುರಗಿ ವಲಯ ನಂ. 2ರ ಅಬಕಾರಿ ಉಪ ನಿರೀಕ್ಷಕ ಪ್ರವೀಣಕುಮಾರ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

Contact Your\'s Advertisement; 9902492681

ಅದೇ ರೀತಿ ಬುಧವಾರದಂದು ಸಣ್ಣೂರ್‍ದಿಂದ ಶ್ರೀನಿವಾಸ ಸರಡಗಿ ಹೋಗುವ ರಸ್ತೆಯ ಸಣ್ಣೂರ ಕ್ರಾಸ್ ಹತ್ತಿರ ರಸ್ತೆಕಾವಲಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ 6 ಲೀಟರ ಕಳ್ಳಭಟ್ಟಿ ಸರಾಯಿ ಸಾಗಾಣಿಕೆ ಮಾಡುತ್ತಿರುವದನ್ನು ಪತ್ತೆ ಹಚ್ಚಿ ಕಳ್ಳಭಟ್ಟಿ ಸರಾಯಿ ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿಪಡಿಸಲಾಗಿದೆ. ಪರಾರಿಯಾದ ಆರೋಪಿಯ ವಿರುದ್ಧ ಕಲಬುರಗಿ ಉಪ ವಿಭಾಗ ಅಬಕಾರಿ ಉಪ ನಿರೀಕ್ಷಕ ಸಂತೋಷ ಬಿರಾದಾರ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

ಈ ದಾಳಿ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರುಗಳಾದ ಬಾಲಕೃಷ್ಣ ಮುದಕಣ್ಣ, ವಿಠ್ಠಲರಾವ ಎಂ. ವಾಲಿ, ಅಬಕಾರಿ ಉಪ ನಿರೀಕ್ಷಕ ದಾವಲಸಾಬ ಸಿಂದೋಗಿ, ಅಬಕಾರಿ ಹಿರಿಯ ರಕ್ಷಕ ಬಸವರಾಜ್, ಅಬಕಾರಿ ರಕ್ಷಕರಾದ ರಾಮೇಶ್ವರ, ಅರವಿಂದ, ಶಿವಪ್ಪಗೌಡ, ರಾಜೇಂದ್ರ ಮೋಹನ, ಯಮುನಾಬಾಯಿ ಹಾಗೂ ಸಿಬ್ಬಂದಿಗಳಾದ ಸುನೀಲ, ಜಗನ್ನಾಥ ಬಿರಾದಾರ ಉಪಸ್ಥಿತರಿದ್ದರು.

ಮೇಲ್ಕಂಡ ಜಪ್ತಿಪಡಿಸಿದ ಅಬಕಾರಿ ವಸ್ತು ಹಾಗೂ ವಾಹನಗಳ ಒಟ್ಟು ಅಂದಾಜು ಮೌಲ್ಯ 1,30,000 ಇರುತ್ತದೆ ಎಂದು ಕಲಬುರಗಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here