ಸೇಡಂ: ದೇಶದ್ಯಂತ ಕೊರೊನಾ ವೈರಸ್ ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮುಂಜಾಗ್ರತೆಗಾಗಿ ಕಠಿಣ ಕ್ರಮಗಳು ಕೈಗೊಂಡಿದ್ದು, ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ.
ಈ ಹಿನ್ನೆಲೆಯಲ್ಲಿ ಪವಿತ್ರ ರಂಜಾನ್ ಪ್ರಯುಕ್ತ ಮಸೀದಿಯಲ್ಲಿ ನಮಾಜ್ ನಿರ್ವಹಿಸಲು ನಾಲ್ಕು ಜನರಿಗೆ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದವರಿಗೆ ಮಾತ್ರ ಅವಕಾಶ ಇದೆ ಎಂದು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಅಧ್ಯಕ್ಷ ಸಾಜಿದ್ ಖಾನ್ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು ಪಟ್ಟಣದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ವತಿಯಿಂದ, ಇಲ್ಲಿನ ಮೋಮಿನ್ ಪುರಾ 48, ಇಂದಿರಾ ನಗರದಲ್ಲಿ 35 ಜನರಿಗೆ, ಇಂತಹ 16 ವಾರ್ಡ್ ಗಳಲ್ಲಿ 220 ಜನರಿಗೆ ಹೊದಿಕೆಗಳು ಮತ್ತು 50 ಆಹಾರ ಧಾನ್ಯ ಕಿಟ್ ವಿತರಿಸಿದರು.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ, ಕೂಲಿ ಕಾರ್ಮಿಕರಿಗೆ ಮತ್ತು ಕಡು ಬಡವರಿಗೆ ಸಹಾಯ ಮಾಡುವ ಉದ್ದೇಶ ಹೊಂದಿರುವುದಾಗಿ ಅವರು ಇ-ಮೀಡಿಯಾ ಲೈನ್ ಜೊತೆ ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಇಕ್ಬಾಲ್ ಖಾನ ಸಾಬ್, ಮೌಲಾನಾ ಯಾಸಿನಸಾಬ್, ಮೊಹಮ್ಮದ್ ಜಾವಿದ್ ನಿರನಾವಿ , ಅಜೀಜ್ ಖಾನ ಸಾಬ್, ಮುಬಿನ್ ಖಾನ್ ಮತ್ತಿತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…