ಸುರಪುರ: ರಾಜುಗೌಡ ಸೇವಾ ಸಮಿತಿಯ ವತಿಯಿಂದ ತಾಲೂಕಿನ ದೇವರ ಗೋನಾಲ ಗ್ರಾಮದಲ್ಲಿನ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡ ಸಣ್ಣ ದೇಸಾಯಿ ಮಾತನಾಡಿ,ಇಂದು ಲಾಕ್‍ಡೌನ್ ಪರಿಣಾಮದಿಂದಾಗಿ ಸಾವಿರಾರು ಬಡ ಕುಟುಂಬಗಳು ತೀವ್ರ ತೊಂದರೆ ಪಡುವಂತಾಗಿದೆ.ಅನೇಕರು ಮಾಡಲು ಕೆಲಸವಿಲ್ಲದೆ ಮನೆ ನಿರ್ವಹಣೆ ಮಾಡುವುದು ಕಷ್ಟಕರವಾಗಿ ಚಿಂತಿಸುವಂತಾಗಿದೆ.ಇದನ್ನು ಮನಗಂಡಿರುವ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ಅಭಿಮಾನಿಗಳು ತಾಲೂಕಿನ ಎಲ್ಲಾ ಊರುಗಳಲ್ಲಿನ ಬಡ ಜನತೆಯ ಮನೆ ಬಾಗಿಲಿಗೆ ಹೋಗಿ ಆಹಾರ ಧಾನ್ಯಗಳ ಕಿಟ್ ಮತ್ತು ಅನ್ನ ನೀರು ವಿತರಿಸುವ ಮೂಲಕ ನೆರವಾಗಿದ್ದಾರೆ ಎಂದರು.
ರಾಜುಗೌಡ ಜನ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ ರಡ್ಡಿ ಮಾತನಾಡಿ,ತಾಲೂಕಿನಲ್ಲಿಯ ಸುಮಾರು ಐದು ಸಾವಿರಕ್ಕೂ ಅಧಿಕ ಜನರಿಗೆ ನಿತ್ಯವು ಅನ್ನ ಮತ್ತು ನೀರು ತಲುಪಿಸುವ ಕೆಲಸ ಮಾಡಲಾಗುತ್ತಿದೆ.ಅಲ್ಲದೆ ಸಾವಿರಾರು ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡಿ ಬಡವರ ಕಣ್ಣೀರು ಒರೆಸುವ ಕೆಲಸವನ್ನು ರಾಜುಗೌಡರ ಅಭೀಮಾನಿಗಳು ಮಾಡುತ್ತಿರುವುದಾಗಿ ತಿಳಿಸಿದರು.
ದೇವಗೋನಾಲ ಗ್ರಾಮದಲ್ಲಿನ ನೂರಕ್ಕು ಹೆಚ್ಚು ಕುಟುಂಬಗಳಿಗೆ ಅಕ್ಕಿ ಬೇಳೆ ಸಕ್ಕರೆ ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಿಂಗಪ್ಪಗೌಡ,ದೇವು ದೊಡ್ಮನಿ, ಬಸವರಾಜ ತನಿಖೇದಾರ,ಆಕಾಶ ಸಮೇದ್, ವಿರೇಶ, ನೀಲಕಂಠ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…