ಬಿಸಿ ಬಿಸಿ ಸುದ್ದಿ

ಕೊರೋನಾ ವೈರಸ್ ಕಂಡುಹಿಡಿಯಲು ಜಿಲ್ಲೆಯಾದ್ಯಂತ ಸಾರ್ವತ್ರಿಕ ಸಮೀಕ್ಷೆ: ಶರತ್ ಬಿ

ಕಲಬುರಗಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಇನ್ಫ್ಲೂಎಂಜಾ ಲೈಕ್ ಇಲ್‍ನೆಸ್ (IಐI), ತೀವ್ರ ಉಸಿರಾಟಿನ ತೊಂದರೆ (SಂಖI) ಹಾಗೂ ತೀವ್ರ ರೀತಿಯ ಅರೋಗ್ಯ ಸಮಸ್ಯೆಯನ್ನು ಹೊಂದಿರುವ ರೋಗಿಗಳನ್ನು ಪತ್ತೆ ಹಚ್ಚಲು ಚುನಾವಣಾ ಮತಗಟ್ಟೆವಾರು ಸಾರ್ವತ್ರಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಈ ಸಮೀಕ್ಷೆ ಮತದಾರರ ಪಟ್ಟಿ ಆಧಾರದ ಮೆಲೆ ಮತಗಟ್ಟೆ ಅಧಿಕಾರಿಯ ವ್ಯಾಪ್ತಿಯನ್ನು ಒಂದು ಘಟಕವನ್ನಾಗಿ ತೆಗೆದುಕೊಂಡು ಮನೆ-ಮನೆ ಭೇಟಿ ನೀಡಿ ಮೂರು ದಿನದೊಳಗೆ ಕುಟುಂಬಗಳ ಮಾಹಿತಿ ಸಂಗ್ರಹಿಸುವ ಯೋಜನೆ ಹೊಂದಲಾಗಿದೆ. ಇದಕ್ಕಾಗಿ ಹೆಲ್ತ್ ವಾಚ್ ಮೋಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ ಎಂದರು.
ಸಮೀಕ್ಷೆ ಕಾರ್ಯದ ಅನುಕೂಲಕ್ಕಾಗಿ ಆರೋಗ್ಯ ಸಿಬ್ಬಂದಿಗಳ ಜೊತೆಗೆ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತದೆ. ಮಾಹಿತಿ ಸಂಗ್ರಹಣೆಗೆ ಮನೆಗೆ ಬರುವ ಮತಗಟ್ಟೆ ಅಧಿಕಾರಿ ಮತ್ತು ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಡಿ.ಸಿ. ಶರತ್ ಬಿ. ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಅಡ್ಡಿಪಡಿಸಿದರೆ ಕಠಿಣ ಕ್ರಮ: ಆರೋಗ್ಯ ಸಮೀಕ್ಷೆಗೆ ಬರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಕ್ಕೆ ಯಾರಾದರು ಅಡ್ಡಿಪಡಿಸಿದಲ್ಲಿ ಅಂತವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಶರತ್ ಬಿ. ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

31 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

32 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

34 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago