ಬಿಸಿ ಬಿಸಿ ಸುದ್ದಿ

ಬಸವಣ್ಣನವರ ಕಾಯಕ ತತ್ವದಂತೆ ಕೆಲಸ ಮಾಡುವ ಶ್ರಮ ಜೀವಿಗಳ ಬದುಕು ಅತಂತ್ರವಾಗಿದೆ ಶಾಸಕರ ಖರ್ಗೆ ಕಳವಳ

ಕಲಬುರಗಿ: ಕಾರ್ಮಿಕ‌ ದಿನಾಚರಣೆ ಹಿನ್ನೆಲೆಯಲ್ಲಿ ಶ್ರಮಿಕರ ವರ್ಗಕ್ಕೆ ಶುಭಾಶಯ ತಿಳಿಸಿ, ಬಸವಣ್ಣನವರ ಕಾಯಕವೇ ಕೈಲಾಸ ತತ್ವದಂತೆ ಕಾರ್ಮಿಕರು ತಮ್ಮ ದುಡಿಮೆಯಲ್ಲೇ ದೇವರನ್ನು ಕಾಣುತಿದ್ದಾರೆ. ಆದರೆ,‌ ಈಗ ಅವರ ಜೀವನ ಅತಂತ್ರ ಸ್ಥಿತಿಯಲ್ಲಿದೆ‌ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಿಸಿದ ನಂತರ‌ ಕೂಲಿ ಕಾರ್ಮಿಕರನ್ನ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರ್ಲಕ್ಷಿಸಿವೆ ಎಂದು ಅಸಮಧಾನ ವ್ಯಕ್ತಪಡಿಸಿರುವ ಶಾಸಕರು ಲಾಕ್ ಡೌನ್ ನಂತರ ಬಹಳ ದೊಡ್ಡ ಸಂಖ್ಯೆಯ ವಲಸೆ ಕಾರ್ಮಿಕರು ನಿರುದ್ಯೋಗಿಗಳಾಗಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ತಮ್ಮ ತಮ್ಮ ಊರುಗಳಿಗೆ ಬರಲಾಗದೇ ದೊಡ್ಡ ನಗರಗಳಲ್ಲಿ‌ ಸಿಲುಕಿರುವ ಅವರು ಒಂದುಕಡೆಯಾದರೆ ಹಾಗೂ ವಾಪಸ್ ಊರಿಗೆ ಬಂದು ನಿರುದ್ಯೋಗಿಗಳಾಗಿರುವ ಭಾರೀ ಸಂಖ್ಯೆಯ ಕಾರ್ಮಿಕರು ಮತ್ತೊಂದು ಕಡೆಯಿದ್ದು ಅವರ ಸಹಾಯಕ್ಕಾಗಿ ಇದುವರೆಗೂ ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಪ್ರಿಯಾಂಕ್ ಖರ್ಗೆ ಅವರು ಪುನರುಚ್ಚರಿಸಿದ್ದಾರೆ.

ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕರ ಅನುಕೂಲಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಅವರ ಬದುಕಿಗೆ ಒಂದು ಭದ್ರ ಬುನಾದಿ ಹಾಕಬೇಕಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago