ಬಿಸಿ ಬಿಸಿ ಸುದ್ದಿ

ಶಹಾಬಾದ: ಜೆಡಿಎಸ್ ಪಕ್ಷದಿಂದ ಕಾರ್ಮಿಕರಿಗೆ ಸನ್ಮಾನ

ಶಹಾಬಾದ: ನಗರದ ಜೆಡಿಎಸ್ ಕಛೇರಿಯಲ್ಲಿ ಶುಕ್ರವಾರ ಜೆಡಿಎಸ್ ಪಕ್ಷದ ವತಿಯಿಂದ ಪೌರಕಾರ್ಮಿಕರನ್ನು ಸನ್ಮಾನಿಸುವುದರ ಮೂಲಕ ಕಾರ್ಮಿಕರ ದಿನಾಚರಣೆಯನ್ನು ಆಚರಿಸಿದರು.

ಜೆಡಿಎಸ್ ಅಧ್ಯಕ್ಷ ರಾಜಮಹ್ಮದ್ ರಾಜಾ ಮಾತನಾಡಿ, ಇಂದು ಕಾರ್ಮಿಕರ ಕಾಯ್ದೆಯ ಮೂಲಕ ಕಾರ್ಮಿಕರ ರಕ್ಷಣೆ ಮಾಡಬೇಕಾದ ನೀತಿ ನಿಯಮಗಳು ಬದಲಾಗುತ್ತಿವೆ. ಅಲ್ಲದೇ ಕಾರ್ಖಾನೆಯ ಮಾಲೀಕರು ದುಡಿಯುವ ವರ್ಗದ ಸವಲತ್ತುಗಳನ್ನು ಕಡಿತಗೊಳಿಸುತ್ತಿವೆ. ಇದರಿಂದ ಕಾರ್ಮಿಕರ ಕುಟುಂಬಗಳು ಸಂಕಷ್ಟದಲ್ಲಿವೆ. ಗುತ್ತಿಗೆ ಆಧಾರದ ಪದ್ದತಿಯನ್ನು ಕಡಿತಗೊಳಿಸಿ ಖಾಯಂ ಪದ್ದತಿ ಜಾರಿಯಾದಾಗ ಮಾತ್ರ ಕಾರ್ಮಿಕರಿಗೆ ನ್ಯಾಯ ದೊರಕಿತಂದಾಗುತ್ತದೆ ಎಂದು ಹೇಳಿದರು.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ ಮಾತನಾಡಿ, ಕಾರ್ಮಿಕರ ಸಂಕಷ್ಟಗಳು ತೊಲಗಬೇಕಾದರೆ ಅನ್ಯಾಯದ ವಿರುದ್ಧ ಧ್ವನಿಯೆತ್ತಬೇಕಾಗಿದೆ. ಈ ದೇಶಕ್ಕೆ ಬಂದ ದೊಡ್ಡ ಗಂಡಾಂತರವೆಂದರೆ ಕರೋನಾ ವೈರಸ್. ಅದನ್ನು ಎದುರಿಸಲು ಹೋರಾಟ ಗಟ್ಟಿಗೊಳಿಸಬೇಕಾಗಿದೆ.ಅದಕ್ಕೆಲ್ಲಾ ನೀವು ನಿಮ್ಮ ನಿಮ್ಮ ಮನೆಯಲ್ಲೇ ಇರಿ. ಮಾಸ್ಕ್‌ಗಳನ್ನು ಧರಿಸಿ ಈ ರೋಗವನ್ನು ತಡೆಗಟ್ಟಬಹುದು ಎಂದರು.

ಜಯಲಕ್ಷ್ಮಿ ಬಂಗರಗಿ, ಮೆಹಬೂಬ ಗೋಗಿ, ಬಸವರಾಜ ಮಯೂರ,ನವನಾಥ ಕುಸಾಳೆ, ಯೂಸುಫ್ ಸಾಹೇಬ, ಸಿದ್ದಲಿಂಗ, ಜಗನ್ನಾಥ ಸುಬೇದಾರ,ಚಾಂದ ಪಾಶಾ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago