ವಾಡಿ: ಬಿಡಿಗಾಸಿನ ಗೌರವ ಧನದಲ್ಲಿ ಬದುಕು ಕಟ್ಟಿಕೊಳ್ಳುವುದು ಕಷ್ಟಸಾಧ್ಯ. ನಮ್ಮ ಆರೋಗ್ಯ ಸೇವೆಯನ್ನು ಪರಿಗಣಿಸಿ ಕನಿಷ್ಟ ವೇತನ ಜಾರಿ ಮಾಡಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಸರಕಾರವನ್ನು ಒತ್ತಾಯಿಸಿದರು.
ಕಾರ್ಮಿಕ ದಿನಾಚರಣೆ ನಿಮಿತ್ತ ಎಐಯುಟಿಯುಸಿ ಕರೆಯ ಮೇರೆಗೆ ಕರ್ತವ್ಯನಿರತ ಸ್ಥಳದಲ್ಲಿಯೇ ಬಿತ್ತಪತ್ರಗಳನ್ನು ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸಿರುವ ಆಶಾ ಕಾರ್ಯಕರ್ತೆಯರು, ಮಾಸಿಕ ಗೌರವಧನ ರೂ.10,000 ಹೆಚ್ಚಿಸುವಂತೆ ಸರಕಾರಕ್ಕೆ ಮನವಿ ಮಾಡಿದರು. ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಅಖಿಲ ಭಾರತ ಮಟ್ಟದ ಪ್ರತಿಭಟನಾ ದಿನವನ್ನು ಬೆಂಬಲಿಸಿ ಸ್ಥಳೀಯ ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು, ವಸತಿ ನಿಲಯ ಕಾರ್ಮಿಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಯ ಅಂಗಳದಲ್ಲಿ ಮೌನ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.
ಚಿತ್ತಾಪುರ ತಾಲೂಕಿನ ವಸತಿನಿಲಯ ಕಾರ್ಮಿಕರ ಎಂಟು ತಿಂಗಳ ಸಂಬಳ ಬಿಡುಗಡೆ ಮಾಡಬೇಕು. ವಸತಿನಿಲಯ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಆಶಾ-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಬೇಕು. ದುಡಿಮೆಯ ಅವಧಿಯನ್ನು ಎಂಟುಗಂಟೆಗೆ ಸೀಮಿತಗೊಳಿಸಬೇಕು. ಸಮಯ ವಿಸ್ತರಣೆ ಕೈಬಿಡಬೇಕು. ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು. ಲಾಕ್‍ಡೌನ್ ಸಂಕಟ ಅನುಭವಿಸುತ್ತಿರುವ ನಮಗೆ ಆಹಾರದ ಕಿಟ್‍ಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು.
ಐತಿಹಾಸಿಕ ಮೇ ದಿನ ಚಿರಾಯುವಾಗಲಿ, ಕಾರ್ಮಿಕ ವರ್ಗದ ಮಹಾನ್ ನಾಯಕರಾದ ಕಾರ್ಲ್ ಮಾಕ್ರ್ಸ್, ಲೆನಿನ್, ಸ್ಟ್ಯಾಲಿನ್, ಮಾವೋ, ಕಾಮ್ರೇಡ್ ಶಿವದಾಸಘೋಷ್ ಅವರ ಚಿಂತನೆಗಳು ಚಿರಾಯುವಾಗಲಿ ಎಂಬ ಘೋಷವಾಕ್ಯಗಳನ್ನು ಪ್ರದರ್ಶಿಸುವ ಮೂಲಕ ಮೇ.1 ವಿಶ್ವ ಕಾರ್ಮಿಕರ ದಿನವನ್ನು ಹೋರಾಟದ ದಿನವನ್ನಾಗಿ ಆಚರಿಸಿದರು. ವಾಡಿ ನಗರ, ಹಳಕರ್ಟಿ, ಲಾಡ್ಲಾಪುರ ಗ್ರಾಮಗಳಲ್ಲೂ ಎಐಯುಟಿಯುಸಿ ಕಾರ್ಯಕರ್ತರು ಮನೆಯ ಅಂಗಳದಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…