ಚಿತ್ರದುರ್ಗ (ಸಾಣೆಹಳ್ಳಿ): ಕೊರೊನಾ ಮಾರಿ ಮರೆಯಾಗುವವರೆಗಾದರೂ ಸಂಪೂರ್ಣ ಮದ್ಯ ನಿಷೇಧ ಮಾಡಿ ನಂತರ ಸರ್ವೆ ಮೂಲಕ ಮುಂದಿನ ಕ್ರಮ ಜರುಗಿಸಬೇಕೆಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಿನ್ನೆ ರಾತ್ರಿ ಕೇಂದ್ರ ಸರ್ಕಾರ ಮದ್ಯ ಪಾನಕ್ಕೆ ಅನುಮತಿ ನೀಡಿರುವುದು ಆಘಾತವಾಗಿದ್ದು, ಸರಕಾರಕ್ಕೆ ಜನರ ಆರೋಗ್ಯಕ್ಕಿಂತ ಆದಾಯವೇ ಮುಖ್ಯವೆಂದು ಭಾವಿಸುವ ನೇತಾರರಿಂದ ಖಂಡಿತ ದೇಶದ ಪ್ರಗತಿ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ಕಾರಣದಿಂದ ಮದ್ಯಪಾನ ನಿಷೇಧಿಸಿದ್ದರಿಂದ ಬಹುತೇಕ ಕುಡುಕರು ಆ ದುಶ್ಚಟದಿಂದ ದೂರವಾಗಲು ನಿರ್ಧರಿಸಿದ್ದರೂ, ಈ ತೀರ್ಮಾನ ನಿದ್ರೆ ಬಂದವರಿಗೆ ನಿದ್ರೆ ಮಾತ್ರೆ ಕೊಟ್ಟಂತಾಗುವುದಲ್ಲದೇ, ಕುಡಿದವರು ಸಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವೇ? ಇದು ಮತ್ತೇನೇನು ಅನಾಹುತಕ್ಕೆ ಕಾರಣವಾಗುವುದೋ? ಕುಡಿತದಿಂದ ಹಣ, ಆರೋಗ್ಯ, ನೆಮ್ಮದಿ ನೆಲಕಚ್ಚುವುದಲ್ಲದೆ ಕಳವು, ಸುಲಿಗೆ, ಅಪಘಾತ ಮತ್ತಿತರ ಅನಾಹುತಗಳು ಸಾಲು ಸಾಲಾಗಿ ನಡೆಯಬೇಕೆ? ಬಡವರಿಗೆ ಕುಡಿಸಿ ಆ ಹಣದಿಂದಲೇ ರಾಜ್ಯಭಾರ ಮಾಡಬೇಕೇ ಎಂಬ ಪ್ರಶ್ನೆಗಳು ಸರಕಾರದ ಮುಂದಿಟ್ಟಿದ್ದಾರೆ.
ಕುಡಿತ ಬಿಟ್ಟಿರುವುದರಿಂದ ಆಗಿರುವ ಅನುಕೂಲತೆ, ಅನಾನುಕೂಲಗಳನ್ನು ಸರ್ವೆ ಮಾಡಿಸಿದ್ದರೆ ಖಂಡಿತ ಕೇಂದ್ರ ಸರ್ಕಾರ ಈ ನಿಲವನ್ನು ತೆಗೆದುಕೊಳ್ಳುತ್ತಿರಲಿಲ್ಲ. ಸರ್ಕಾರದ ನಿಲುವು ಉಗ್ರವಾಗಿ ಸಾರ್ವಜನಿಕರ ಆರೋಗ್ಯ, ಆದಾಯ, ನೆಮ್ಮದಿಯ ಹಿನ್ನೆಲೆಯಲ್ಲಿ ಖಂಡಿಸಲಾಗುವುದು ಎಂದರು.
ಜನಪರ ಕಾಳಜಿ ಇರುವ ರಾಜಕೀಯ ನೇತಾರರು, ಮಠಾಧೀಶರು, ವೈದ್ಯರು, ಮಾಧ್ಯಮದವರು, ಸಂಘಟನೆಗಳು ವಿರೋಧ ಪ್ರಕಟಿಸಿ ಸರಕಾರದ ಕಣ್ಣು ತೆರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…