ನರೇಗಾ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

0
48

ಶಹಾಬಾದ: ಕಾರ್ಮಿಕರ ದಿನಾಚರಣೆಯ ನಿಮಿತ್ತ ನರೇಗಾ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳಕ್ಕೆ ಹೋಗಿ, ಕಾರ್ಮಿಕರಿಗೆ ತಾಲೂಕಾಢಳಿತದ ವತಿಯಿಂದ ಸನ್ಮಾನಿಸಿ, ಶುಭ ಕೋರಿ, ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಪ್ರಮಾಣ ವಚನ ಭೋಧಿಸಲಾಯಿತು.

ಭಂಕೂರ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯಲ್ಲಿ ಕೆಲಸದಲ್ಲಿ ತೊಡಗಿರುವ ಸುಮಾರು 21 ಜನರಿಗೆ ಸನ್ಮಾನಿಸುವುದರ ಮೂಲಕ ಗೌರವ ಸೂಚಿಸಿದರು.ಅಲ್ಲದೇ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು, ಹಾಲು, ಬಾಳೆಹಣ್ಣು ಹಾಗೂ ಊಟದ ವ್ಯವಸ್ಥೆ ಕೂಡ ಮಾಡಿದ್ದರು.

Contact Your\'s Advertisement; 9902492681

ಕೊರೊನಾ ವೈರಸ್ ಹರಡುತ್ತಿರುವುದರಿಂದ ಲಾಕ್ ಡೌನ್ ಮಾಡಲಾಗಿದೆ.ಈ ಸಂದರ್ಭದಲ್ಲಿ ಬಡಜನರಿಗೆ ಬಹಳಷ್ಟು ತೊಂದರೆಯಾಗುತ್ತಿರುವುದು ನಿಜ.ಆದ್ದರಿಂದಲೇ ಸರ್ಕಾರ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬಡ ಜನರಿಗೆ ಕೆಲಸ ನೀಡುತ್ತಿದೆ. ಈ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾವುಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಮತ್ತು ಮಾಸ್ಕ್‍ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು ಎಂದು ತಹಸೀಲ್ದಾರ ಸುರೇಶ ವರ್ಮಾ ಜಾಗೃತಿ ಮೂಡಿಸಿದರು.

ಕೋವಿಡ್-19 ನೋಡಲ್ ಅಧಿಕಾರಿ ನೀಲಗಂಗಾ. ಎಸ್. ಬಬಲಾದ, ಸಿಪಿಐ ಅಮರೇಶ. ಬಿ, ತಾಪಂ ಇಓ ಲಕ್ಷ್ಮಣ ಶೃಂಗೇರಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here