ಶಹಾಬಾದ: ಕಾರ್ಮಿಕರ ದಿನಾಚರಣೆಯ ನಿಮಿತ್ತ ನರೇಗಾ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳಕ್ಕೆ ಹೋಗಿ, ಕಾರ್ಮಿಕರಿಗೆ ತಾಲೂಕಾಢಳಿತದ ವತಿಯಿಂದ ಸನ್ಮಾನಿಸಿ, ಶುಭ ಕೋರಿ, ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಪ್ರಮಾಣ ವಚನ ಭೋಧಿಸಲಾಯಿತು.
ಭಂಕೂರ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯಲ್ಲಿ ಕೆಲಸದಲ್ಲಿ ತೊಡಗಿರುವ ಸುಮಾರು 21 ಜನರಿಗೆ ಸನ್ಮಾನಿಸುವುದರ ಮೂಲಕ ಗೌರವ ಸೂಚಿಸಿದರು.ಅಲ್ಲದೇ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು, ಹಾಲು, ಬಾಳೆಹಣ್ಣು ಹಾಗೂ ಊಟದ ವ್ಯವಸ್ಥೆ ಕೂಡ ಮಾಡಿದ್ದರು.
ಕೊರೊನಾ ವೈರಸ್ ಹರಡುತ್ತಿರುವುದರಿಂದ ಲಾಕ್ ಡೌನ್ ಮಾಡಲಾಗಿದೆ.ಈ ಸಂದರ್ಭದಲ್ಲಿ ಬಡಜನರಿಗೆ ಬಹಳಷ್ಟು ತೊಂದರೆಯಾಗುತ್ತಿರುವುದು ನಿಜ.ಆದ್ದರಿಂದಲೇ ಸರ್ಕಾರ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬಡ ಜನರಿಗೆ ಕೆಲಸ ನೀಡುತ್ತಿದೆ. ಈ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾವುಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಮತ್ತು ಮಾಸ್ಕ್‍ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು ಎಂದು ತಹಸೀಲ್ದಾರ ಸುರೇಶ ವರ್ಮಾ ಜಾಗೃತಿ ಮೂಡಿಸಿದರು.
ಕೋವಿಡ್-19 ನೋಡಲ್ ಅಧಿಕಾರಿ ನೀಲಗಂಗಾ. ಎಸ್. ಬಬಲಾದ, ಸಿಪಿಐ ಅಮರೇಶ. ಬಿ, ತಾಪಂ ಇಓ ಲಕ್ಷ್ಮಣ ಶೃಂಗೇರಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…