ಕೊರೋನಾ: ಖಾಸಗಿ ವಿದ್ಯಾಸಂಸ್ಥೆಯ ಕಟ್ಟಡಗಳು ಸ್ವಾಧೀನಕ್ಕೆ ಆಗ್ರಹಿಸಿ

0
110

ಕಲಬುರಗಿ : ಮಹಾಮಾರಿ ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿರುವ ಖಾಸಗಿ ವಿದ್ಯಾಸಂಸ್ಥೆಯ ಕಟ್ಟಡಗಳು ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಆಗಮಿಸುತ್ತಿರುವ ಜನರಿಗೆ ಸ್ಥಳವಕಾಶ ಕಲ್ಪಿಸಲು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಬಹುನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ವಿಜಯಕುಮಾರ ಓಕಳಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕೊವಿಡ್-19, ಕರೋನಾ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಹಾಗೂ ಜನ ಸಂದಣಿ ನಿಯಂತ್ರಿಸಲು ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತವು ಕಲಂ 144 ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಹೊರ ರಾಜ್ಯ ಹಾಗೂ ಬೇರೆ-ಬೇರೆ ಜಿಲ್ಲೆಗಳಿಂದ ಕಲಬುರಗಿಗೆ ಬಂದಿರುವ ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯದ ಹಿತದೃಷ್ಠಿಯಿಂದ ಸರಕಾರಿ ಕಟ್ಟಡಗಳನ್ನು ಸ್ವಾಧಿನಪಡಿಸಿಕೊಳ್ಳಬೇಕು. ಇತರ ರಾಜ್ಯ ಮತ್ತು ಜಿಲ್ಲೆಗಳಿಂದ ಕಲಬುರಗಿ ಜಿಲ್ಲೆಗೆ ಬರಲು 3-ದಿನಗಳ ಕಾಲಾವಕಾಶ ಮುಕ್ತ ನೀಡಿರುವುದರಿಂದ ಪ್ರತಿ ಜಿಲ್ಲೆಯಲ್ಲಿ ಸುಮಾರು 3 ರಿಂದ 4ಸಾವಿರ ಜನರು ಪ್ರತಿ ತಾಲೂಕಿಗೆ ಬರುವ ಸಂಭವ ಇದೆ ಎಂದು ಅಂದಾಜಿಸಲಾಗಿದೆ.

ಸುಮಾರು 20 ರಿಂದ 25ಸಾವಿರ ಜನರ ಹೋಮ್ ಕ್ವಾರಂಟೈನ್‍ಗಾಗಿ ಜಿಲ್ಲೆಯಾದ್ಯಂತ ಇರುವ ಖಾಸಗಿ ಸಂಸ್ಥೆಗಳ ಕಟ್ಟಡಗಳನ್ನು ಸ್ವಾಧಿನಪಡಿಸಿಕೊಂಡು ಜನರ ಆರೋಗ್ಯ ಕಾಪಾಡಬೇಕು ಎಂದು ಒತ್ತಾಯಿಸಿದ ಅವರು, ಮುಂಬೈ, ಚನೈ, ಬೆಂಗಳೂರು ಇತರ ಕಡೆಯಿಂದ ಕಾರ್ಮಿಕರು, ವಿದ್ಯಾರ್ಥಿಗಳನ್ನು ಕಲಬುರಗಿ ಜಿಲ್ಲೆಗೆ ಮರಳಿ ಕರೆತರಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಅನೀಲ ಟೆಂಗಳಿ ಅವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here