ವೈದ್ಯ ಶಿಕ್ಷಣ ಶುಲ್ಕ ಹೆಚ್ಚಳ: ಎಐಎಸ್‍ಇಸಿ ವಿರೋಧ

0
57

ವಾಡಿ: ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಶುಲ್ಕ ಹೆಚ್ಚಿಸಿರುವ ಸರಕಾರದ ಕ್ರಮವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‍ಇಸಿ) ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಸಂಚಾಲಕ ವೀರಭದ್ರಪ್ಪ ಆರ್.ಕೆ, ಇಡೀ ದೇಶದಲ್ಲಿ ಕೊರೊನಾ ಮಹಾಮಾರಿಯಿಂದ ಜನರ ಆರ್ಥಿಕ ಪರಿಸ್ಥಿತಿ ಘೋರವಾಗಿದೆ. ಇಂತಹ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಲು ಸರಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಶಗಳನ್ನು ನೀಡಿ ಉತ್ತಮ ವೈದ್ಯರನ್ನು ತಯಾರಿಸಬೇಕು. ಆದರೆ ರಾಜ್ಯ ಸರಕಾರ ಖಾಸಗಿ ವೈದ್ಯ ಕಾಲೇಜುಗಳಲ್ಲಿನ ಸರಕಾರಿ ಕೋಟಾದ ಶುಲ್ಕವನ್ನು ಶೇ.23 ರಷ್ಟು ಹೆಚ್ಚಿಸಿಸುವ ಮೂಲಕ ಸುಲಿಗೆಗೆ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಈಗಾಗಲೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕವನ್ನು ರೂ. 1.13 ಲಕ್ಷಕ್ಕೆ ಹೆಚ್ಚಿಸಿದೆ. ಸರ್ಕಾರದ ಇಂತಹ ಶಿಕ್ಷಣ ವಿರೋಧಿ, ಜನ ವಿರೋಧಿ ನೀತಿಯ ಫಲವಾಗಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸಾಮಾಜಿಕ ವ್ಯವಸ್ಥೆಗೆ ತಜ್ಞ ವೈದ್ಯರ ಅವಶ್ಯಕತೆ ಸಾಕಷ್ಟಿದೆ. ಪರಿಣಾಮ ಸರಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು. ವೃತ್ತಿಪರ ಕಾಲೇಜುಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಖಾತ್ರಿಪಡಿಸಬೇಕು.

ಎಲ್ಲಾ ಸರಕಾರಿ ವೈದ್ಯಕೀಯ ಮತ್ತು ದಂತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸರಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಖಾಸಗಿ ವೃತ್ತಿಪರ ಕಾಲೇಜುಗಳಲ್ಲಿ ಎಲ್ಲಾ ಸೀಟುಗಳನ್ನು ಸರಕಾರಿ ಕೋಟದಡಿಯಲ್ಲಿ ಅರ್ಹತೆಯ ಆಧಾರದ ಮೇಲೆ ಹಂಚಬೇಕು. ಸಾಮಾನ್ಯ ಜನರ ಕೈಗೆಟಕುವ ದರದಲ್ಲಿ ಶುಲ್ಕ ನಿಗದಿಪಡಿಸಲು ರಾಜ್ಯ ಮತ್ತು ಕೇಂದ್ರ ಶಾಸನವನ್ನು ರೂಪಿಸಬೇಕು ಎಂದು ಹೋರಾಟಗಾರ ವೀರಭದ್ರಪ್ಪ ಆರ್.ಕೆ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here