ಕಲಬುರಗಿ: ಕೊರೋನಾ ಸೋಂಕಿನಿಂದ ಗುಣಮುಖರಾದ ಕಲಬುರಗಿ ನಗರದ ಇಬ್ಬರು ಮತ್ತು ಶಹಾಬಾದ ಪಟ್ಟಣದ ಓರ್ವ ಬಾಲಕ ಸೇರಿದಂತೆ ಮೂವರು ರೋಗಿಗಳನ್ನು ಸೋಮವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಕಲಬುರಗಿ ನಗರದ ಖಾದ್ರಿ ಚೌಕ್ ಪ್ರದೇಶದ 34 ವರ್ಷದ ಯುವಕ (ರೋಗಿ ಸಂಖ್ಯೆ-360), ಮೋಮಿನಪುರ ಪ್ರದೇಶದ 30 ವರ್ಷದ ಯುವತಿ (ರೋಗಿ ಸಂಖ್ಯೆ-393) ಹಾಗೂ ಶಹಾಬಾದ ಪಟ್ಟಣದ ಅಪ್ಪರ ಮಡ್ಡಿ ಪ್ರದೇಶದ 16 ವರ್ಷದ ಬಾಲಕ(ರೋಗಿ ಸಂಖ್ಯೆ-361) ಇವರುಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಗೊಂಡವರಾಗಿದ್ದಾರೆ.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಪತ್ತೆಯಾದ 63 ಜನರಲ್ಲಿ ಒಟ್ಟು 21 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.