ಕಲಬುರಗಿ: ಚಿಂಚೋಳಿ ಹಾಗೂ ಕಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ರವಿವಾರ ಮೇ 19ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು, ಶಾಂತಿಯುತ ಹಾಗೂ ನ್ಯಾಯಸಮ್ಮತ ಚುನಾವಣೆ ಮತದಾನಕ್ಕೆ ಆಯಾ ಜಿಲ್ಲೆಗಳ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ರವಿವಾರ ಮೇ 19 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ 11 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ಚಿಂಚೋಳಿ ಉಪಚುನಾವಣೆಯಲ್ಲಿ 99,047 ಪುರುಷ, 94,814 ಮಹಿಳಾ ಮತದಾರರು ಹಾಗೂ 16 ಇತರೆ ಮತದಾರರು ಸೇರಿದಂತೆ ಒಟ್ಟು 1,93,877 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅಣಿಯಾಗಿದ್ದಾರೆ.
ಕ್ಷೇತ್ರದ್ಯಂತ ಒಟ್ಟು 241 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ 60 ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಅತಿ ಸೂಕ್ಷ್ಮ ಮತಗಟ್ಟೆಗಳ ಪೈಕಿ 25 ಮತಗಟ್ಟೆಗಳಿಗೆ ವೆಬ್‌ಕ್ಯಾಮರಾ ಅಳವಡಿಸಲಾಗಿದ್ದು, ಉಳಿದ 35 ಮತಗಟೆಗಳಿಗೆ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ. ಇದಲ್ಲದೆ 60 ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಸಿ.ಆರ್.ಪಿ.ಎಫ್ ಜವಾನ್ ಸೇರಿದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮತದಾನ ಕಾರ್ಯಕ್ಕಾಗಿ ಒಟ್ಟು 1,112 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇದಲ್ಲದೇ ಪ್ರತಿ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗೆ ರ‍್ಯಾಂಪ್, ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ಕ್ಷೇತ್ರದ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಮತದಾರರಲ್ಲಿ ಮನವಿ ಮಾಡಿದ್ದಾರೆ.
ವಿಕಲಚೇತನರಿಗೆ ವಿನೂತನ ವ್ಯವಸ್ಥೆ: ಈ ಬಾರಿ ಚುನಾವಣೆಯಲ್ಲಿ ವಿಕಲಚೇತನರಿಗೆ ವಿನೂತನ ವ್ಯವಸ್ಥೆಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು, ವಿಕಲಚೇತನ ಮತದಾರರನ್ನು ಮನೆಯಿಂದ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗದ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ರ‍್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿದೋಷವುಳ್ಳವರಿಗೆ ಸಹಾಯವಾಗಲು ಬ್ರೈಲ್ ಬ್ಯಾಲೆಟ್ ಪೇಪರ್ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿಶೇಷ ಮತಗಟ್ಟೆಗಳು: ಉಪ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಚಿಂಚೋಳಿ ಪಟ್ಟಣದಲ್ಲಿರುವ ಮತಗಟ್ಟೆ ಸಂಖ್ಯೆ 131ನ್ನು ಸಖಿ ಮತಗಟ್ಟೆಯಾಗಿ ಪರಿವರ್ತಿಸಲಾಗಿದೆ. ಇಲ್ಲಿ 566 ಮಹಿಳಾ, 524ಪುರುಷ ಹಾಗೂ ಇತರೆ 1 ಮತದಾರರು ಸೇರಿದ್ದಾರೆ. ಗೋಟೂರ ಸರ್ಕಾರಿ ಪ್ರೌಢಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 210ರಲ್ಲಿ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದೆ. ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ವಿಕಲಚೇತನರ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಚಿಂದನೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 118ರಲ್ಲಿ ಪಿ.ಡಬ್ಲ್ಯೂಡಿ. ಬೂತ್ ಎಂದು ಸ್ಥಾಪಿಸಲಾಗಿದೆ. ಈ ಮತಗಟ್ಟೆಯಲ್ಲಿ 60 ವಿಕಲಚೇತನ ಮತದಾರರು ಇದ್ದಾರೆ.
ಪೊಲೀಸ್ ಬಂದೋಬಸ್ತ್: ಶಾಂತಿಯುತವಾಗಿ ಚುನಾವಣೆ ಜರುಗಲು ೩ ಡಿಎಸ್‌ಪಿ, 25ಪಿಎಸ್‌ಐ ಮತ್ತು ಸಿಪಿಐ, 750 ಪೊಲೀಸ್ ಪೇದೆ, ಪೊಲೀಸ್ ಮುಖ್ಯ ಪೇದೆ ಹಾಗೂ ಗೃಹ ರಕ್ಷಕದಳದ ಸಿಬ್ಬಂದಿಗಳು ಹಾಗೂ 400 ಸಿಆರ್‌ಪಿಎಫ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮತದಾನ ದಿನದಂದು ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಕಾಪಾಡುವ ದೃಷ್ಠಿಯಿಂದ ಮತದಾರರು ಮತಗಟ್ಟೆಗೆ ಮೊಬೈಲ್ ಹಾಗೂ ಕ್ಯಾಮೆರಾ ತರುವುದನ್ನು ನಿಷೇಧಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…