ಕಲಬುರಗಿ: ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕಿನ ನಿಯಂತ್ರಣಕ್ಕೆ ಹೋರಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಕಲಬುರಗಿ ಜಿಲ್ಲಾ ಗುತ್ತಿಗೆದಾರರ ಸಂಘವು 25 ಲಕ್ಷ ರೂ. ಗಳ ದೇಣಿಗೆ ಮೊತ್ತದ ಚೆಕ್ಕನ್ನು ಮಂಗಳವಾರ ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ನೀಡಿದರು.
ಡಿ.ಸಿ. ಅವರಿಗೆ ಚೆಕ್ ನೀಡಿದ ನಂತರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಖಜಿ ಮಾತನಾಡಿ ಸಂಘದ ಸದಸ್ಯರಿಂದ ಹಣ ಸಂಗ್ರಹಣೆ ಮಾಡಲಾಗಿದ್ದು, ಕೋವಿಡ್ ವಿರುದ್ಧ ಹೋರಾಟಕ್ಕೆ ಗುತ್ತಿಗೆದಾರರ ಅಲ್ಪ ಸೇವೆ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಅಮೀನ್ ಮುಖ್ತಾರ ಅಹ್ಮದ್, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಎನ್.ಎಸ್.ಮೂಲಗೆ, ಮೋಹಸಿನ್ ಎನ್.ಪಟೇಲ್, ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿ ಸಂಜಯ ಅರ್.ಕೆ., ರಾಜ್ಯ ಎಸ್.ಸಿ.ಎ. ಸದಸ್ಯ ಎಂ.ಕೆ.ಪಾಟೀಲ, ಸದಸ್ಯರಾದ ಎಸ್.ವೈ.ಪಾಟೀಲ, ರಿಯಾಜ್ ಪಟೇಲ್, ಬಸವರಾಜ ಸಜ್ಜನ್, ಅಣ್ಣಾರಾವ ಸನ್ಮನಿ, ಮನ್ಸೂರ್ ಎ. ಪಟೇಲ್, ಗುರುನಂಜಯ್ಯ ಅರ್.ವಿ., ರವಿಶಂಕರ ಹಂದ್ರಾಳ, ಸಿರಾಜ್ ಪಟೇಲ್ ಸೇರಿದಂತೆ ಇನ್ನಿತರ ಸದಸ್ಯರು ಮತ್ತು ಗುತ್ತಿಗೆದಾರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…