ಕೊರೋನಾ ಸೋಂಕಿನಿಂದ ಮತ್ತಿಬ್ಬರು ಗುಣಮುಖ

0
62

ಕಲಬುರಗಿ: ನಗರದ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಮತ್ತು ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಅವರು ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಅವರು ತಿಳಿಸಿದ್ದಾರೆ.

ಇವರಿಬ್ಬರಿಗೂ ಏ.20ರಂದು ಕೊರೋನಾ ಸೋಮಕು ದೃಢವಾಗಿದ್ದರಿಂದ ಚಿಕಿತ್ಸೆಗೆ ದಾಖಲಾಗಿಸಿತ್ತು.

Contact Your\'s Advertisement; 9902492681

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಪತ್ತೆಯಾದ 64ರಲ್ಲಿ ಒಟ್ಟು 24 ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 34 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here