ಸುರಪುರ: ಬಡ ಜನರಿಗೆ ಕೊರೊನಾ ಲಾಕ್‍ಡೌನ್ ಘೋಷಣೆಯಿಂದ ತೊಂದರೆಯಾಗಬಾರದೆಂದು ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತು ಪಡಿತರ ಚೀಟಿ ಇಲ್ಲದವರಿಗೂ ಪಡಿತರ ವಿತರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರಕಾರ ಆದೇಶ ಮಾಡಿದೆ,ಆದರೆ ತಾಲೂಕಿನ ಕೆಲ ಗ್ರಾಮಗಳಲ್ಲಿನ ನ್ಯಾಯಬೆಲೆ ಅಂಗಡಿಯವರು ಉದ್ದೇಶಪೂರ್ವಕವಾಗಿ ಪಡಿತರ ಚೀಟಿದಾರರಿಗೆ ಪಡಿತರ ಧಾನ್ಯಗಳ ನೀಡದೆ ವಂಚನೆ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ಆರೋಪಿಸಿದರು.
ನಗರದ ತಹಸೀಲ್ದಾರ ಕಚೇರಿಯಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿ,ತಾಲೂಕಿನ ಮಂಗಿಹಾಳ ಚಿಕನಳ್ಳಿ ಚೌಡೇಶ್ವರಿಹಾಳ ಅಡ್ಡೊಡಗಿ ಮತ್ತಿತರೆ ಗ್ರಾಮಗಳಲ್ಲಿನ ನ್ಯಾಯಬೆಲೆ ಅಂಗಡಿಯವರು ಗ್ರಾಮದ ಕೆಲವು ಪಡಿತರದಾರರಲ್ಲಿ ಪಡಿತರ ಚೀಟಿ ಇದ್ದು ಆಹಾರ ಧಾನ್ಯಗಳನ್ನು ಪಡೆಯಲು ಬಂದಾಗ ಬೇರೆ ಬೇರೆ ಸಬೂಬು ಹೇಳಿ ಕಳುಹಿಸಿ,ನಂತರ ಕೊನೆಗೆ ಪಡಿತರ ಧಾನ್ಯಗಳ ವಿತರಣೆ ಮಾಡದೆ ಎಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರ ಧಾನ್ಯಗಳನ್ನು ದುರುಪಯೋಗಪಡಿಸಿ ವಂಚಿಸಿದ್ದಾರೆ.ಈಗ ಲಾಕ್‍ಡೌನ್ ಸಂಕಷ್ಟಕ್ಕೆ ಸಿಲುಕಿರುವ ಈ ಗ್ರಾಮಗಳಲ್ಲಿನ ಅನೇಕ ಬಡ ಕುಟುಂಬಗಳು ಪಡಿತರ ಇಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುತ್ತಿವೆ ಎಂದು ಆರೋಪಸಿದರು.
ನಾವು ಹೆಸರಿಸಿದ ಗ್ರಾಮಗಳಲ್ಲಿನ ನ್ಯಾಯಬೆಲೆ ಅಂಗಡಿಯವರ ವಂಚನೆಯನ್ನು ತನಿಖೆ ಮಾಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರರು ನ್ಯಾಯಬೆಲೆ ಅಂಗಡಿಗಳ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮು ನಾಯಕ ಮಲ್ಲಿಬಾವಿ,ತಾಲೂಕು ಉಪಾಧ್ಯಕ್ಷ ಶಿವಮೋನಯ್ಯ ನಾಯಕ,ಹಣಮಗೌಡ ಶಖಾಪುರ,ಶ್ರೀನಿವಾಸ ನಾಯಕ ಲಕ್ಷ್ಮೀಪುರ,ಷಣ್ಮುಖ ಅಡ್ಡೊಡಗಿ,ಪ್ರಭು ಮಂಗಿಹಾಳ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…