ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ಮರಗೋಳ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಹೋಗಿದ್ದ ಪೊಲೀಸ್ ಪೇದೆಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.
ದತ್ತಾತ್ರೇಯ ಪೊಲೀಸ್ ಪೇದೆ ಮರಗೋಳ ಗ್ರಾಮದ ಬೀಟ್ ಪೊಲೀಸ್ ಆಗಿದ್ದು, ಬೆಳಗ್ಗೆ ಕರ್ತವ್ಯದ ಮೇಲೆ ಹೋಗಿದ್ದರು ಆಗ ಅಕ್ರಮವಾಗಿ ಮರಳು ತುಂಬಿದ ಟ್ರ್ಯಾಕ್ಟರ್ ಎದುರಿಗೆ ಬಂದಿದ್ದನ್ನು ನೋಡಿದ ಪೊಲೀಸ್ ಪೇದೆ ಅದನ್ನು ತಡೆಯಲು ಬೈಕ್ ಮೇಲೆ ಇದ್ದ ಪೊಲೀಸ್ ಪೇದೆ ಮುಂದಾಗಿದ್ದನ್ನು ಗಮನಿಸಿದ ಟ್ರ್ಯಾಕ್ಟರ್ ಚಾಲಕ ಪೊಲೀಸ್ ಪೇದೆಯ ಬೈಕ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಪೊಲೀಸ್ ಪೇದೆಯ ಕಾಲಿಗೆ, ಕೈಗೆ, ರಕ್ತದ ಗಾಯಗಳಾಗಿದ್ದು ಹಾಗೂ ಪೊಲೀಸ ಪೆದೆಯ ಬೈಕು ನಂಜ್ಜುಗುಜ್ಜಾಗಿದೆ. ಗಾಯಗೊಂಡ ಪೊಲೀಸ್ ಪೇದೆಯನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಎಸ್ಐ ಶ್ರೀಶೈಲ್ ಅಂಬಾಟಿ ತಿಳಿಸಿದರೆ.
ಘಟನಾ ಸ್ಥಳಕ್ಕೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಪಘಾತ ಘಟನೆ ಜರುಗಿದ ತಕ್ಷಣ ಚಾಲಕ ಪರಾರಿಯಾಗಿದ್ದಾನೆ ಟ್ರ್ಯಾಕ್ಟರ್ ಮಾಲೀಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…