ಹೈದರಾಬಾದ್ ಕರ್ನಾಟಕ

ಮಾಸ್ಕ್ ಇಲ್ಲದೆ ಹೊರಗೆ ಬಂದವರಿಗೆ ಬಿತ್ತು ನೂರು ರೂಪಾಯಿಗಳ ದಂಡ

ಸುರಪುರ: ಈಗಾಗಲೆ ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾಗಿ ಅನಾವಶ್ಯಕವಾಗಿ ಜನರು ಹೊರಗೆ ಬರದಂತೆ ಆದೇಶ ಹೊರಡಿಸಲಾಗಿದೆ.

ಅಲ್ಲದೆ ಕೊರೊನಾ ಸೊಂಕು ಹರಡದಂತೆ ತಡೆಯಲು ವ್ಯಕ್ತಿಯಿಂದ ವ್ಯಕ್ತಿಗೆ ಆರು ಫೀಟ್‍ಗಳ ಅಂತರದ ಸಾಮಾಜಿಕ ಅಂತರ ಪಾಲನೆ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ.ಆದರೆ ಸರಕಾರಗಳ ನಿಯಮಗಳನ್ನು ಮೀರಿ ಮಾಸ್ಕ್ ಇಲ್ಲದೆ ಹೊರಗೆ ಬರುವವರಿಗೆ ದಂಡ ಹಾಕುವ ಪ್ರಕ್ರಿಯೆ ನಗರದಲ್ಲಿ ಆರಂಭಗೊಂಡಿದೆ.

ನಗರದ ನಗರಸಭೆ ಮುಂಬಾಗದಲ್ಲಿಯ ಮುಖ್ಯ ರಸ್ತೆಯ ಮೇಲೆ ಮಾಸ್ಕ್ ಇಲ್ಲದೆ ಬಂದ ಬೈಕ್ ಸವಾರರಿಗೆ ಮತ್ತಿತರರಿಗೆ ನಗರಸಭೆ ಸಿಬ್ಬಂದಿ ದಂಡ ವಿಧಿಸಿದರು.ಬೈಕ್ ಸವಾರರು ಮುಖಕ್ಕೆ ಮಾಸ್ಕ್ ಇಲ್ಲದೆ ಬಂದವರನ್ನು ಪಕ್ಕಕ್ಕೆ ನಿಲ್ಲಿಸಿ ನೂರು ರೂಪಾಯಿಗಳ ದಂಡ ಹಾಕಿ ಒಂದು ಮಾಸ್ಕ್ ನೀಡಿ ಸದಾಕಾಲ ಮಾಸ್ಕ್ ಹಾಕಿಕೊಂಡೆ ಹೊರಗೆ ಬರುವಂತೆ ತಿಳಿಸಿದರು.ಬೆಳಿಗ್ಗೆಯಿಂದ ಮದ್ಹ್ಯಾನದ ವರೆಗೆ ಸುಮಾರು ಅರವತ್ತಕ್ಕೂ ಹೆಚ್ಚು ಬೈಕ್ ಸವಾರರಿಗೆ ದಂಡ ಹಾಕಿ ಅರಿವು ಮೂಡಿಸಿದರು.

ಸಾಮಾಜಿಕ ಅಂತರ ಪಾಲಿಸುವುದು ಪ್ರತಿಯೊಬ್ಬ ವ್ಯಕ್ತಿಗೆ ಕಡ್ಡಾಯ ನಿಯಮವಾಗಿದ್ದು ಪಾಲಿಸದವರಿಗೆ ದಂಡ ವಿಧಿಸಲಾಗುವುದು ಎಂದು ಸುರಪುರ ಉಪ ವಿಭಾಗದ ಉಪ ಅಧೀಕ್ಷಕ ವೆಂಕಟೇಶ ಹುಗಿಬಂಡಿ ತಿಳಿಸಿದ್ದಾರೆ.

ಮೋಟರ ಬೈಕ್ ಮೇಲೆ ಕೇವಲ ಒಬ್ಬರು ಮಾತ್ರ ಪ್ರಯಾಣಿಸಬೇಕು. ಆಟೋದಲ್ಲಿ ಕೇವಲ ಮೂರು ಜನರು,ಕಾರ್‍ನಲ್ಲಿ ಕೇವಲ ಮೂರು ಜನರು ಮಾತ್ರ ಪ್ರಯಾಣಿಸಬಹುದು ಈ ನಿಯಮಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುವುದು ಕಂಡು ಬಂದಲ್ಲಿ ಅಂತಹ ವಾಹನಗಳಿಗೆ ದಂಡ ಹಾಕುವುದು ಅಥವಾ ಪ್ರಕರಣವನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.ಜನರು ತಮ್ಮ ಆರೋಗ್ಯದ ಹಿತ ದೃಷ್ಟಿಯಿಂದ ಸಾಮಾಜಿಕ ಅಂತರ ಪಾಲನೆಗೆ ಆದ್ಯತೆ ನೀಡುವಂತೆ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago